Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಯ 20ಎಕರೆ ಜಾಗ ರಕ್ಷಿಸಲು ಕನ್ನಡಿಗರ ರಕ್ಷಣಾ ವೇದಿಕೆ ಒತ್ತಾಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಿಂದಿನ ಪುರಸಭೆಗೆ ಸೇರಿರುವ ಸರ್ವೇ ನಂಬರ್
11220ಎಕರೆ ಜಾಗ ಹಾಲಿ ನಗರಸಭೆಗೆ ಸೇರಿದ ಸ್ವತ್ತು ಎಂದು ದಾಖಲೆಗಳಲ್ಲಿ ನಮೂದಾಗಿದ್ದು ಇದನ್ನು ರಕ್ಷಿಸುವಂತೆ ಕನ್ನಡಿಗರ ರಕ್ಷಣಾ ವೇದಿಕೆ ಒತ್ತಾಯಿಸಿದೆ.

    ಇದಕ್ಕೆ ಸಂಬಂಧಿಸಿದಂತೆ ಸಂಘಟನೆ ವತಿಯಿಂದ ನಗರಸಭೆ ಪೌರಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಸಂಸ್ಥಾಪಕ ಬಿ. ಎಸ್. ಚಂದ್ರಶೇಖರ್ ಪತ್ರಿಕಾ ಹೇಳಿಕೆ ನೀಡಿ ನಗರಸಭೆ ಪಕ್ಕದಲ್ಲಿರುವ 20ಎಕರೆ ಜಾಗವು ಪುರಸಭೆಗೆ ಸೇರಿದೆಂದು ದಾಖಲೆಗಳು ಹೇಳುತ್ತಿವೆ. ಆದರೂ ಕೂಡಾ ಇದು ಪುರಸಭೆ ಜಾಗವೆಂದು ಮೇಲ್ನೋಟಕ್ಕೆ ಕಾಣುತ್ತಿಲ್ಲ.

         ದೊಡ್ಡಬಳ್ಳಾಪುರ ನಗರ ಅತಿ ವೇಗವಾಗಿ ಬೆಳೆಯುತ್ತಿದ್ದು ಮುಂಬರುವ ದಿನಗಳಲ್ಲಿ ಪ್ರಸ್ತುತ ಜಾಗವು ನಗರದ ಕೇಂದ್ರ ಬಾಗವೆಂದು ಗೋಚರಿಸುವ ಲಕ್ಷಣಗಳು ಕಾಣುತ್ತಿವೆ. ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಯಾಗಿರುವುದರಿಂದ ಗ್ರೇಡ್. 1ನಗರಸಭೆಯಾಗಿ ಮುಂಬಡ್ತಿ ಪಡೆದುಕೊಂಡಿದೆ.

ಹೀಗಾಗಿ ಮೂಲ ಸೌಕರ್ಯಗಳು ಹೆಚ್ಚಾಗಬೇಕು. ಆದ್ದರಿಂದ ಹಳೆಯ ಪುರಸಭೆ ಹೆಸರಿನಲ್ಲಿರುವ ನಗರಸಭೆಗೆ ಹೊಂದಿಕೊಂಡಿರುವ 20ಎಕರೆ ಜಾಗವನ್ನು ಅಳತೆ ಮಾಡಿಸಿ ನಗರಸಭೆಯ ಸುಪರ್ದಿಗೆ ತೆಗೆದುಕೊಳ್ಳಬೇಕಿದೆ.

ಈ ಜಾಗದಲ್ಲಿ ಫುಡ್ ಪಾರ್ಕ್ ನಿರ್ಮಿಸಿದರೆ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಈ ಜಾಗ ಭಗತ್ ಸಿಂಗ್ ಕ್ರೀಡಾಂಗಣ, ಕೆ. ಎಸ್. ಆರ್. ಟಿ. ಸಿ. ಬಸ್ ಡಿಪೋ, ಹಾಗೂ ಟಿ. ಎ. ಪಿ. ಎಂ. ಸಿ. ಎಸ್ ಕಚೇರಿ ಸರ್ವೇ ನಂಬರ್ 112ಕ್ಕೆ ಸೇರಿದ್ದು ಇದೆಲ್ಲವೂ ಪುರಸಭೆ ವ್ಯಾಪ್ತಿಗೆ ಬರುವುದರಿಂದ ಈ ಜಾಗವನ್ನು ರಕ್ಷಿಸಿ ನಗರಸಭೆಗೆ ಸೇರಿಸಿಕೊಳ್ಳಬೇಕೆಂದು ಚಂದ್ರಶೇಖರ್ ಹೇಳಿದ್ದಾರೆ.

     ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರದಾನ ಕಾರ್ಯದರ್ಶಿ ಉದಯ್ ಕುಮಾರ್ ಸಂಘಟನಾ ಕಾರ್ಯದರ್ಶಿ ಶಿವಾನಂದ, ಸುರೇಶ ಪ್ರಶಾಂತ್ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ