Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನ್ಸಿರಾಮ್ ರವರ 92 ನೇ ಜನ್ಮದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಲ್ ಇಂಡಿಯಾ ಬಹು ಸಮಾಜ ಪಾರ್ಟಿ ಯಿಂದ ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ನಗರದ  ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಬಹುಜನ ನಾಯಕ ಮಾನ್ಯ ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ಪಿ. ವೆಂಕಟೇಶ್ ಮಾತನಾಡಿ  ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು. ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಕಾನ್ಸಿರಾಮ್ ಅವರು ಎಂದಿಗೂ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಲಿಲ್ಲ.

ಬಹುಜನರು ರಾಜಕೀಯ ಅಧಿಕಾರ ಪಡೆಯಬೇಕೆಂಬ ಹೆಬ್ಬಯಕೆಯಿಂದ ಕಾನ್ಸಿರಾಮ್ ಅವರು ಬಿಎಸ್ಪಿ ಪಕ್ಷ ಆರಂಭಿಸಿದರು. ಬಹುಜನರ ಏಳಿಗೆಗಾಗಿ ಅವರ ಕೊಡುಗೆ ಅಪಾರ.

ಕೇಂದ್ರಸರ್ಕಾರದ ನೂತನ ನೀತಿಗಳಿಂದ ಖಾಸಗೀರಣಗೊಳ್ಳುತ್ತಿರುವ ಸರ್ಕಾರಿ ಸಂಸ್ಥೆಗಳ ಉದ್ಯೋಗಗಳಲ್ಲಿ ಮೀಸಲಾತಿ ಜಾರಿಯಾಗಬೇಕು. ಇದರಿಂದ ದಲಿತ ಮತ್ತು ಹಿಂದುಳಿದ ವರ್ಗದ ಜನತೆಗೆ ದೇಶಾದ್ಯಂತ ಅನುಕೂಲವಾಗಲಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ರಾಜಕಾರಣ ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲದೆ, ದೇಶದಲ್ಲಿ ಭ್ರಷ್ಟಾಚಾರ, ಅಧಿಕಾರ ವಹಿಸಿಕೊಂಡವರ ದಬ್ಬಾಳಿಕೆ ತೊಲಗಿಸಬೇಕು. ಕಾನ್ಶಿರಾಮ್ ಅವರು ಇದೇ ದೃಷ್ಟಿಯಿಂದ ಪಕ್ಷವನ್ನು ಬಲಪಡಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಮತದಾರರಿಗೆ ಹಣ, ಮದ್ಯ ಹಂಚಿಕೆ ಮಾಡಿ ರಾಷ್ಟ್ರೀಯ ಪಕ್ಷಗಳು ಜನರನ್ನು ದಾರಿ ತಪ್ಪಿಸುತ್ತಿವೆ. ಸಾಮಾಜಿಕ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಸಾರ್ವಜನಿಕ ಸರಕಾರಿ ಕಚೇರಿಗಳಲ್ಲಿ ಬಡವರ, ಮದ್ಯಮ ವರ್ಗದವರ ಕೆಲಸಗಳು ಆಗುತ್ತಿಲ್ಲ. ಉಳ್ಳವರಿಗೆ ಮಾತ್ರ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಮುನಿಕೃಷ್ಣಪ್ಪ, ನಾಗರಾಜು, ಬಸವರಾಜು, ಜಿಲ್ಲಾಧ್ಯಕ್ಷ ಮಹದೇವ, ತಾಲ್ಲೂಕ್ ಅಧ್ಯಕ್ಷ ನಂಜೇಶ, ಜಿಲ್ಲಾ ಖಜಾಂಚಿ ಹೇಮಾ ಚಕ್ರಪಾಣಿ ಸೇರಿದಂತೆ ಇತರರು ಹಾಜರಿದ್ದರು.

ಕಾನ್ಸಿರಾಮ ಅವರ ತತ್ವವು ಮುಖ್ಯವಾಗಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ (ಬಹುಜನ್) ಸಾಮಾಜಿಕ ಮತ್ತು ರಾಜಕೀಯ ಸಬಲೀಕರಣದ ಮೇಲೆ ಆಧಾರಿತವಾಗಿದೆ. "ರಾಜಕೀಯ ಅಧಿಕಾರವು ಎಲ್ಲಾ ಸಮಸ್ಯೆಗಳಿಗೆ ಪರಿಹಾರ" ಎಂಬುದು ಅವರ ಮೂಲ ಮಂತ್ರವಾಗಿತ್ತು, ಇದರ ಮೂಲಕ ಶೋಷಿತ ವರ್ಗಗಳನ್ನು ಬೆಳಕಿನೆಡೆಗೆ ತರುವಲ್ಲಿ ತಮ್ಮ ಹಕ್ಕುಗಳನ್ನು ಪಡೆಯಲು ಮತ್ತು ಆಡಳಿತಗಾರರಾಗಲು ಶ್ರಮಿದವರು ಕಾನ್ಸಿರಾಮ ರವರು.
ನಂಜೇಶ
, ಅಧ್ಯಕ್ಷರು, ಆಲ್ ಇಂಡಿಯಾ ಬಹು ಜನ ಸಮಾಜ ಪಾರ್ಟಿ, ದೊಡ್ಡಬಳ್ಳಾಪುರ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ