Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯದಿಂದ ಅನಾರೋಗ್ಯದತ್ತ-ಹಳಿ ತಪ್ಪಿದ ಕರ್ನಾಟಕ ಆಡಳಿತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಎಲ್ಲಿಯ ಆರೋಗ್ಯ ಇಲಾಖೆ? ಎಲ್ಲಿಯ ಅಬಕಾರಿ ಇಲಾಖೆ? ಇಂತಹ ವರ್ಗಾವಣೆ ನಿಯಮಕ್ಕೆ ವಿರುದ್ಧ ಎನ್ನುವ ಅರಿವೂ ಸ್ವತಃ ಮುಖ್ಯಮಂತ್ರಿಗಳಿಗೆ ಇಲ್ಲವೇ? ತನಗೆ ಎಲ್ಲ ಕಾನೂನು ಗೊತ್ತು, ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ್ದೇನೆ ಎನ್ನುವ ಸಿದ್ದರಾಮಯ್ಯನವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡುವ ಆಲೋಚನೆ ಎಲ್ಲಿಂದ ಬಂತೋ?! ಎಂದು ರವಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ಸರ್ಕಾರಿ ಆಸ್ಪತ್ರೆಗಳಂತೂ ಔಷಧಗಳ ಕೊರತೆಯಿಂದ ನರಳುತ್ತಿವೆ. ಪರಿಸ್ಥಿತಿ ಹೀಗಿದ್ದೂ, ಇಂತಹ ಅವೈಜ್ಞಾನಿಕ ವರ್ಗಾವಣೆಗೆ ಮುಖ್ಯಮಂತ್ರಿಗಳೇ ನಿರ್ದೇಶನ ನೀಡಲು ಹೇಗೆ ಸಾಧ್ಯ?

ಅಬಕಾರಿ ಇಲಾಖೆ ಈಗಾಗಲೇ 6,000 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಹಗರಣದ ಕೂಪವಾಗಿದೆ. ಇಲಾಖೆಗೆ ಸರ್ಜರಿ ಮಾಡಬೇಕು ಎಂದರೆ, ವೈದ್ಯಾಧಿಕಾರಿಗಳನ್ನು ಅಲ್ಲಿಗೆ ವರ್ಗಾವಣೆ ಮಾಡಬೇಕು ಎಂದರ್ಥವಲ್ಲ! ಬಹುಶಃ ಇದರ ಹಿಂದೆ ಕಾಣದ 'ಕೈ'ಗಳ ಕೈವಾಡವಿದ್ದರೂ ಇರಬಹುದು!.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುರ್ಚಿ ಕದನದಲ್ಲಿ ಸಿಲುಕಿ, ಆಡಳಿತವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ, ಅಥವಾ ಮರೆತೇ ಬಿಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಉತ್ತಮ ಆಡಳಿತ ನಿರೀಕ್ಷಿಸುವುದು ಕೇವಲ ಕನಸಿನ ಮಾತು ಎಂದು ಸಿ.ಟಿ ರವಿ ಅವರು ಟೀಕಾಪ್ರಹಾರ ಮಾಡಿದ್ದಾರೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ