Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಕರ್ನಾಟಕದ ಜಾತಿ ಗಣತಿ ಮಾದರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕದ ಜಾತಿಗಣತಿ ವರದಿಯೇ ಮಾದರಿ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.


ಸಿಎಂ ಸಿದ್ದರಾಮಯ್ಯ ಅವರೇ, ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ. ಮೂಲ ಪ್ರತಿ ಕಳೆದು ಹೋಗಿರುವ, ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ಜಾತಿ ಜನಗಣತಿಯನ್ನ ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಅಶೋಕ್ ತಿರುಗೇಟು ನೀಡಿದ್ದಾರೆ.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಗೆ ಜಾತಿ ಗಣತಿಯನ್ನ ಎಂದಿಗೂ ಚುನಾವಣಾ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳಲಿಲ್ಲ. ಅಧಿಕಾರವಿದ್ದಾಗ ಜಾತಿ ಜನಗಣತಿ ಮಾಡುವ ನಿರ್ಧಾರ ಕೈಗೊಂಡು ಬದ್ಧತೆ ಪ್ರದರ್ಶನ ಮಾಡಿದ್ದೇವೆಯೇ ಹೊರತು ವಿಪಕ್ಷದಲ್ಲಿದಾಗ ಮೊಸಳೆ ಕಣ್ಣೀರು ಸುರಿಸಿ, ಅಧಿಕಾರ ಇದ್ದಾಗ ನಿರ್ಲಕ್ಷ್ಯ ಮಾಡುವ ಕೀಳು ರಾಜಕೀಯ ಮಾಡಿಲ್ಲ. ಇದು ಸಾಮಾಜಿಕ ನ್ಯಾಯದ ಬಗ್ಗೆ ನಮಗಿರುವ ನೈಜವಾದ ಬದ್ಧತೆ. ಜಾತಿ ಜನಗಣತಿ ಬಗ್ಗೆ ಬಿಜೆಪಿಯದ್ದು ಇದ್ದ ತಕರಾರು ಒಂದೇ. ಅದು ರಾಜಕೀಯ ದಾಳವಾಗಿ ದುರ್ಬಳಕೆ ಆಗಬಾರದು ಎಂಬುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈಗ ನಡೆಸಲಿರುವ ಜಾತಿ ಗಣತಿ ಅತ್ಯಂತ ಪಾರದರ್ಶಕವಾಗಿ, ವೈಜ್ಞಾನಿಕವಾಗಿ, ಸದುದ್ದೇಶದಿಂದ ನಡೆಯಲಿದೆಯೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದಂತೆ ರಾಜಕೀಯ ಅನುಕೂಲಕ್ಕಾಗಿ ಮೂಗಿನ ನೇರಕ್ಕೆ ದತ್ತಾಂಶವನ್ನು ತಿರುಚುವ ದುರುದ್ದೇಶದಿಂದ ಮಾಡುವುದಿಲ್ಲ ಎಂದು ಅಶೋಕ್ ದೂರಿದ್ದಾರೆ.

ಕರ್ನಾಟಕದ ಜಾತಿ ಗಣತಿ ಪ್ರಕ್ರಿಯೆ ಜಾತಿಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಮಾದರಿಯೇ ಹೊರತು ಅದರಲ್ಲಿ ಅನುಸರಿವಂತಹ ಯಾವುದೇ ಒಳ್ಳೆಯ ಅಂಶಗಳೂ ಇಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ