Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಮಾಚಲ ಸರ್ಕಾರದ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಆರ್ಥಿಕ ಸಂಪನ್ಮೂಲವನ್ನು ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೇ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎನ್ನುವುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶ ಸರ್ಕಾರ ಸಾಕ್ಷಿ ಒದಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.


ಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಲ್ಲಿ ಈಗಾಗಲೇ ನಷ್ಟವನ್ನು ಅನುಭವಿಸಿದ್ದು, ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ಬಡ್ಡಿರಹಿತವಾಗಿ 2 ಸಾವಿರ ಕೋಟಿ ರೂ ಸಾಲ ನೀಡಲು ಮುಂದಾಗಿದೆ ಎಂದು ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆಯ ನಷ್ಟವನ್ನು ಸರಿದೂಗಿಸಲು ವಾಣಿಜ್ಯ ಹಾಗೂ ಉತ್ಪಾದಕ ವಲಯದ ಮೇಲೆ ವಿದ್ಯುತ್ ದರ ಹೆಚ್ಚಿಸಿರುವುದರ ಪರಿಣಾಮ, ಪರೋಕ್ಷವಾಗಿ ಜನ ಸಾಮಾನ್ಯರು ಇದರ ಬಿಸಿ ಅನುಭವಿಸುವಂತಾಗಿದೆ.

ಗೃಹ ಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲಾಗದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ಉಳಿಸಿಕೊಂಡಿರುವ ಬಾಕಿ ಕಂತುಗಳನ್ನು ಪಾವತಿಸಿ ಯೋಜನೆಯನ್ನು ಮತಬ್ಯಾಂಕ್ ಸೃಷ್ಟಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಯುವನಿಧಿ ಯೋಜನೆ ಯುವ ಜನರ ಪಾಲಿಗೆ ಗಗನಕುಸುಮವಾಗಿಯೇ ಉಳಿದಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ.

ಸಮಾಜ ಹಾಗೂ ನಾಡನ್ನು ಕಟ್ಟುವ ಮಾನವ ಸಂಪನ್ಮೂಲದ ಪ್ರಮುಖ ಭಾಗವಾಗಿರುವ ರೈತಾಪಿ ವರ್ಗ, ಶ್ರಮಿಕರು, ಯುವ ಜನರು, ವಿದ್ಯಾರ್ಥಿಗಳ ಹಾಗೂ ಮಹಿಳೆಯರ ಭವಿಷ್ಯಕ್ಕಾಗಿ ಯಾವುದೇ ಯೋಜನೆ ರೂಪಿಸದೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುವ ಮೂಲಕ ತನ್ನ ಖಜಾನೆ ಬರಿದು ಮಾಡಿಕೊಂಡಿದೆ. ಇದು ನಾಡಿನ ಜನರಿಗೆ ತಿಳಿಯದ ವಿಷಯವೇನಲ್ಲ, ಏಕೆಂದರೆ ಇದರ ಪರಿಣಾಮವನ್ನು ತೆರಿಗೆದಾರರು ನಿತ್ಯ ಅನುಭವಿಸುತ್ತಲೇ ಇದ್ದಾರೆ ಎಂದು ವಿಜಯೇಂದ್ರ ಹರಿಹಾಯ್ದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಹಿಂತೆಗೆದುಕೊಳ್ಳುತ್ತಿರುವ ಹಿಮಾಚಲ ಕಾಂಗ್ರೆಸ್  ಸರ್ಕಾರದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಅದರಲ್ಲಿ ಆಶ್ಚರ್ಯವೇನಿಲ್ಲ, ಸಿದ್ದಾರಮಯ್ಯನವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಜನತೆಗೆ ನೀಡಿರುವ ವಚನ ಪಾಲನೆ ಹಾಗೂ ಜಾರಿಗೊಳಿಸಿರುವ ಯೋಜನೆಯನ್ನು ಸರಿದೂಗಿಸುವ ಬದ್ಧತೆ ಇದ್ದರೆ ಈ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಾಕೀತು ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ