Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಭಾರತದ FDI ಯಾತ್ರೆಯ ಚಾಲಕ ಶಕ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (
DPIIT) ಪ್ರಕಟಿಸಿದ ಇತ್ತೀಚಿನ ದತ್ತಾಂಶದಂತೆ 2024-25ನೇ ಸಾಲಿನಲ್ಲಿ ಕರ್ನಾಟಕವು $6.62 ಶತಕೋಟಿ ಮೌಲ್ಯದ ವಿದೇಶಿ ನೇರ ಹೂಡಿಕೆಗಳನ್ನು ಆಕರ್ಷಿಸಿ, ದೇಶದ ಶ್ರೇಷ್ಠ FDI ತಾಣಗಳ ಪೈಕಿ ನಂಬರ್ 2 ಸ್ಥಾನದಲ್ಲಿದೆ.

ಈ ಮೈಲಿಗಲ್ಲು ಕೇವಲ ಸಂಖ್ಯೆಯಲ್ಲ - ಇದು ಭಾರತದ ಆರ್ಥಿಕ ಭವಿಷ್ಯವನ್ನು ರೂಪಿಸುವಲ್ಲಿ ಕರ್ನಾಟಕದ ಬೆಳೆಯುತ್ತಿರುವ ಪಾತ್ರವನ್ನು ಪ್ರತಿಬಿಂಬಿಸುತ್ತದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನಮ್ಮ ಸರಕಾರದ ಉದ್ಯಮಸ್ನೇಹಿ ನೀತಿಗಳು ಹಾಗೂ ಮೂಲ ಸೌಕರ್ಯದಲ್ಲಿ ಸಾಧಿಸಿದ ಗಣನೀಯ ಸುಧಾರಣೆಗಳು ವಿದೇಶಿ ನೇರಬಂಡವಾಳ ಹರಿದು ಬರಲು ಕಾರಣವಾಗಿದ್ದು, ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವು ಅಪ್ರತಿಮ ಆಕರ್ಷಣಾ ಕೇಂದ್ರವಾಗಿದೆ.

ಅರೆವಾಹಕ ತಂತ್ರಜ್ಞಾನದಿಂದ ಆರಂಭಿಸಿ ಏರೋಸ್ಪೇಸ್, ಎಲೆಕ್ಟ್ರಿಕ್ ವಾಹನಗಳು, ಬಯೋಟೆಕ್ ತನಕ ಪ್ರತಿಯೊಂದು ಮುಂದಿನ ತಲೆಮಾರಿಗೆ ಸೇರಿದ ತಂತ್ರಜ್ಞಾನ ಕ್ಷೇತ್ರವೂ ಇಲ್ಲಿ ನೆಲೆಸುತ್ತಿವೆ. ಭಾರತದ ಜಾಗತಿಕ ಭವಿಷ್ಯವನ್ನು ರೂಪಿಸುವಲ್ಲಿ ಕರ್ನಾಟಕ ಒಂದು ನಿರ್ಣಾಯಕ ಶಕ್ತಿ ಕೇಂದ್ರ! ಎಂದು ಸಚಿವರು ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ