Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕರ್ನಾಟಕ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು
, ರಾಜ್ಯಕ್ಕೆ ಬರೋಬ್ಬರಿ 6,000 ಕೋಟಿ ರೂಪಾಯಿಗಳ ಭಾರಿ ಬಂಡವಾಳ ಹರಿದುಬರುತ್ತಿದೆ. ಈ ಕ್ಷೇತ್ರಗಳ ಉತ್ಪಾದನೆಗೆ ಕರ್ನಾಟಕವೇ ಅತ್ಯಂತ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
​ರಾಜ್ಯ ಸರ್ಕಾರ ನಿರ್ಮಿಸಿರುವ ಕೈಗಾರಿಕಾ ಸ್ನೇಹಿ ಪರಿಸರಕ್ಕೆ ಕೈಗನ್ನಡಿಯಾಗಿ
ಆಕ್ಸಿಸ್ಕೇಡ್ಸ್ ಏರೋಸ್ಪೇಸ್ಸಂಸ್ಥೆಯು ರಾಜ್ಯದಲ್ಲಿ ದೊಡ್ಡ ಮಟ್ಟದ ಬಂಡವಾಳ ಹೂಡಿಕೆಗೆ ಮುನ್ನಡೆದಿದೆ.

​​ಶಕ್ತಿಕೇಂದ್ರವಾಗಿ ಕರ್ನಾಟಕ: ಈ ಬೃಹತ್ ಹೂಡಿಕೆಯು ಕರ್ನಾಟಕವನ್ನು ರಕ್ಷಣಾ ಮತ್ತು ವೈಮಾನಿಕ ಕ್ಷೇತ್ರದ ಪ್ರಮುಖ ಶಕ್ತಿಕೇಂದ್ರವನ್ನಾಗಿ ರೂಪಿಸುವ ಸರ್ಕಾರದ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿ ತುಂಬಿದೆ.

​ಉದ್ಯೋಗ ಸೃಷ್ಟಿ ಮತ್ತು ತಂತ್ರಜ್ಞಾನ ವೃದ್ಧಿ: ಈ ಯೋಜನೆಯಿಂದಾಗಿ ರಾಜ್ಯದಲ್ಲಿ ವ್ಯಾಪಕ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಕೇವಲ ಉದ್ಯೋಗ ಮಾತ್ರವಲ್ಲದೆ, ಭವಿಷ್ಯದ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳಿಗೆ ಕರ್ನಾಟಕವು ಭದ್ರ ನೆಲೆಯಾಗಿ ಮುಂದುವರಿಯಲು ಇದು ದಾರಿಯಾಗಲಿದೆ.

"ನಮ್ಮ ಸರ್ಕಾರ ನಿರ್ಮಾಣ ಮಾಡಿರುವ ಕೈಗಾರಿಕಾ ಸ್ನೇಹಿ ಪರಿಸರದ ಪರಿಣಾಮ ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯಕ್ಕೆ ಮತ್ತೊಂದು ದೊಡ್ಡ ಹೂಡಿಕೆ ಹರಿದು ಬರುತ್ತಿದೆ. ಆಕ್ಸಿಸ್ಕೇಡ್ಸ್ ಏರೋಸ್ಪೇಸ್ ರಾಜ್ಯದಲ್ಲಿ ₹6,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ," ಎಂದು ಸಚಿವ ಎಂ.ಬಿ. ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

​ಈ ಹೂಡಿಕೆಯು ದೇಶೀಯ ರಕ್ಷಣಾ ಉತ್ಪಾದನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿರೀಕ್ಷೆಯಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST