LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕವೇ ಭಾರತದ ರಕ್ಷಣಾ ವ್ಯವಸ್ಥೆಯ ಬೆನ್ನೆಲುಬು: ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದನೆ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕವು ಭಾರತದ ರಕ್ಷಣಾ ವ್ಯವಸ್ಥೆಗೆ ಬಲವಾದ ಆಸರೆಯಾಗಿದ್ದುರಾಜ್ಯವೇ ದೇಶದ ರಕ್ಷಣಾ ಕ್ಷೇತ್ರದ ಬೆನ್ನೆಲುಬಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ 'ಕಾರ್ಗಿಲ್ ವಿಜಯ ದಿವಸಕಾರ್ಯಕ್ರಮದಲ್ಲಿ ಭಾಗವಹಿಸಿಗಡಿ ಕಾಯುವಾಗ ವೀರಮರಣ ಅಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು. 

1999ರ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ 527 ಅಮರ ಯೋಧರಲ್ಲಿ ಕರ್ನಾಟಕದ 13 ವೀರ ಯೋಧರೂ ಸೇರಿದ್ದಾರೆ. ಶತ್ರುಗಳ ಕುತಂತ್ರವನ್ನು ಮೆಟ್ಟಿ ನಿಂತು ತ್ರಿವರ್ಣ ಧ್ವಜವನ್ನು ಎತ್ತರಕ್ಕೆ ಹಾರಿಸಿದ ಆ ಎಲ್ಲಾ ವೀರ ಯೋಧರ ತ್ಯಾಗಕ್ಕೆ ಶಿರಸಾಷ್ಟಾಂಗ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಿಎಂ ಹೇಳಿದರು. 

ರಕ್ಷಣಾ ಕ್ಷೇತ್ರದಲ್ಲಿ ಕರ್ನಾಟಕದ ಮಹತ್ವದ ಕೊಡುಗೆ:  ಎಚ್‌ಎಎಲ್ಬಿಇಎಲ್‌ಬಿಇಎಂಎಲ್‌ಇಸ್ರೋಡಿಆರ್‌ಡಿಒಎಡಿಎಎನ್‌ಎಎಲ್‌ ಹಾಗೂ ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಗಳು ದೇಶದ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿವೆ. ಈ ಎಲ್ಲಾ ಸಂಸ್ಥೆಗಳ ಉಪಸ್ಥಿತಿಯಿಂದಾಗಿ ಕರ್ನಾಟಕವು ರಕ್ಷಣಾ ರಂಗದ ಶಕ್ತಿ ಕೇಂದ್ರವಾಗಿದೆ.  ಯೋಧರು ದೇಶದ ಜೀವಾಳ:  ಸೈನಿಕರು ಗಡಿಯಲ್ಲಿ ಹಗಲಿರುಳು ನಮಗಾಗಿ ಕಾವಲು ಕಾಯುತ್ತಿರುವುದರಿಂದಲೇ ನಾವು ಮನೆಯಲ್ಲಿ ನೆಮ್ಮದಿಯಿಂದ ನಿದ್ರಿಸಲು ಸಾಧ್ಯವಾಗಿದೆ. ಸೈನಿಕರುಯುವಕರುಮಹಿಳೆಯರುರೈತರು ಮತ್ತು ತೆರಿಗೆದಾರರು ಕೈಯ ಐದು ಬೆರಳುಗಳಿದ್ದಂತೆಈ ಐದೂ ಬೆರಳುಗಳು ಸೇರಿದಾಗ ಪ್ರಚಂಡ ಮುಷ್ಟಿಯಾಗಿ ದೇಶವನ್ನು ಮುನ್ನಡೆಸುತ್ತವೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಮಾತನ್ನು ಸ್ಮರಿಸಿದರು.

 ಯೋಧರ ಕುಟುಂಬಗಳ ಕಲ್ಯಾಣಕ್ಕೆ ಬದ್ಧ:  ಯೋಧರ ಮತ್ತು ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಕಲ್ಯಾಣಕ್ಕಾಗಿ ಯಾವುದೇ ಸಲಹೆಗಳಿದ್ದರೂ ಸ್ವೀಕರಿಸಲು ಸರ್ಕಾರ ಸದಾ ಸಿದ್ಧವಾಗಿದೆ ಎಂದು ಭರವಸೆ ನೀಡಿದರು.

 ಬರ ಪರಿಹಾರಕ್ಕೆ ಕೇಂದ್ರದ ನೆರವಿನ ನಿರೀಕ್ಷೆ:  ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ರಾಜ್ಯದ ಬರ ಸ್ಥಿತಿಎದುರಿಸುತ್ತಿರುವ ತೊಂದರೆಗಳು ಹಾಗೂ ಬಾಕಿಯಿರುವ ವಿವಿಧ ಯೋಜನೆಗಳ ಕುರಿತು ಚರ್ಚಿಸಲು ಸೋಮವಾರ ಸಂಜೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಹಾಗೂ ಕೇಂದ್ರ ಸಚಿವರ ಸಭೆ ಕರೆಯಲಾಗಿದೆ. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗುವ ನಿರೀಕ್ಷೆಯಿದ್ದುಆಗಸ್ಟ್ 13ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆಪ್ರಶ್ನೆ ಪತ್ರಿಕೆ ಸೋರಿಕೆಗೆ ಜಿಲ್ಲಾಧಿಕಾರಿಗಳ ಹೊಣೆ: ಕಾಂಗ್ರೆಸ್ ವಿರುದ್ಧ ‘ದ್ವಂದ್ವ ನೀತಿ’ ಆರೋಪ ಹೊರಿಸಿದ ಆರ್. ಅಶೋಕ್ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿ: ಹೆಚ್.ಡಿ. ಕುಮಾರಸ್ವಾಮಿ