Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳುಕೌಶಲ್ಯ, ಮೂಲ ಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ಬೆಂಗಳೂರು ಟೆಕ್ ಸಮ್ಮಿಟ್28 ನೇ ಆವೃತ್ತಿ ಉದ್ಘಾಟಿಸಿ ಅವರು ಮಾತನಾಡಿದರು.

ಐತಿಹಾಸಿಕ ಹೆಜ್ಜೆ:
ಈ ಶೃಂಗಸಭೆಯಲ್ಲಿ
, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 20252030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್  ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್‍ಅಪ್‍ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ ಹೇಳಿದರು.

ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿರುವ  ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು  ಅಂತರರಾಷ್ಟ್ರೀಯ ಸಹಭಾಗಿತ್ವದಲ್ಲಿ ನಾವೀನ್ಯತೆ  ಮತ್ತು ತಂತ್ರಜ್ಞಾನದಲ್ಲಿ ಹೊಸ  ಆವಿಷ್ಕಾರಗಳನ್ನು ಸಂಶೋಧಿಸಿ, ಸೃಷ್ಟಿಸಿ   ಹೊಸ ದಿಕ್ಕಿನಲ್ಲಿ ಹೆಜ್ಜೆಗಳನ್ನಿಟ್ಟು ವಿಶ್ವದ ಗಮನವನ್ನು ಕರ್ನಾಟಕದತ್ತ ಸೆಳೆಯುತ್ತಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ.

ಈ ಸಮಾವೇಶದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಪರಿಣತರು ತಮ್ಮ  ಜ್ಞಾನ, ಕೌಶಲ್ಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಂಡು ರಾಜ್ಯದ ಭವಿಷ್ಯವನ್ನು ರೂಪಿಸುವಲ್ಲಿ ಪರಿವರ್ತನೆಯ ಹರಿಕಾರರಾಗುತ್ತಾರೆಂದು ಎಂದರು.

ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ :
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು
, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದರು.

ಈ ವರ್ಷದ ಧ್ಯೇಯವಾಕ್ಯ: "ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ , ಜಗತ್ತನ್ನು ಮುಂದೆ  ಕೊಂಡೊಯ್ಯುವುದು" ಎಂಬುದಾಗಿದೆ. ಈ ಆಶಯ  ನಮ್ಮ ಸಾಮೂಹಿಕ ಧ್ಯೇಯದ  ಸಂಕಲ್ಪವನ್ನು ಎತ್ತಿ ಹಿಡಿಯುತ್ತದೆ.

ಈ ಧ್ಯೇಯ ವಾಕ್ಯದ ಆಶಯದಂತೆ ಬೆಂಗಳೂರು  ತಂತ್ರಜ್ಞಾನ ಶೃಂಗಸಭೆ- 2025, ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ 600ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, 1200ಕ್ಕೂ ಹೆಚ್ಚು ಪ್ರದರ್ಶಕರು, 60ಕ್ಕೂ ಹೆಚ್ಚು ದೇಶದ ನಿಯೋಗಗಳು ಮತ್ತು ಸಾವಿರಾರು ಪರಿಣತರು ಮುಂದಿನ ದಶಕಗಳಲ್ಲಿ ತಂತ್ರಜ್ಞಾನದ ರೂಪುರೇಷಗಳನ್ನು , ಹೊಸ ಸಾಧ್ಯತೆಗಳನ್ನು ಇಲ್ಲಿ ಸಂವಾದಿಸಿ, ಕೇವಲ ಕರ್ನಾಟಕಕ್ಕಾಗಲಿ ಅಥವಾ ಭಾರತಕ್ಕೆ ಆಗಲಿ ಮಾತ್ರವಲ್ಲ, ಇಡೀ ಜಗತ್ತಿಗೇ ತೆರೆದಿಡುತ್ತಾರೆ ಎಂದು ತಿಳಿಸಿದರು.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025  ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ.  ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ