Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಫೋನ್ -17ರ ಉತ್ಪಾದನೆ ಆರಂಭಿಸಿದ ಕರ್ನಾಟಕ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾಗತಿಕ ಮಾರುಕಟ್ಟೆಯಲ್ಲಿ ಕರ್ನಾಟಕದ ಐ ಪೋನ್ ಗಳು
| ಉತ್ಪಾದನೆ  ಆರಂಭಿಸಿದ ಫಾಕ್ಸ್ ಕಾನ್ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಸಮೀಪದ ದೇವನಹಳ್ಳಿಯ ಹೊಸ ಘಟಕದಲ್ಲಿ ಫಾಕ್ಸ್ ಕಾನ್ ತನ್ನ ಇತ್ತೀಚಿನ #iPhone17 ಉತ್ಪಾದನೆಯನ್ನು ಪ್ರಾರಂಭಿಸಿರುವುದನ್ನು ಹರ್ಷದಿಂದ ಹಂಚಿಕೊಳ್ಳುತ್ತಿದ್ದೇನೆ. ಇದು ಚೀನಾದ ಹೊರಗಿನ ಫಾಕ್ಸ್ ಕಾನ್ ನ ಎರಡನೇ ಅತಿದೊಡ್ಡ ಘಟಕವಾಗಿದೆ. $2.8 ಬಿಲಿಯನ್ (25,000 ಕೋಟಿ) ಹೂಡಿಕೆಯಿಂದ ನಿರ್ಮಿತವಾಗಿದೆ ಎಂದು ಸಚಿವ ಪಾಟೀಲ್ ತಿಳಿಸಿದ್ದಾರೆ.

ಈ ಸಾಧನೆ ಕೇವಲ ಸ್ಮಾರ್ಟ್ ಫೋನ್ ಗಳ ಅಸೆಂಬ್ಲಿ ಕುರಿತು ಮಾತ್ರವಲ್ಲ, ಕರ್ನಾಟಕವು ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮುತ್ತಿರುವುದಕ್ಕೆ ಮತ್ತೊಂದು ಮಹತ್ವದ ಸಾಕ್ಷಿಯಾಗಿದೆ. ಸಾವಿರಾರು ಉದ್ಯೋಗಗಳು ಸೃಷ್ಟಿಯಾಗುತ್ತಿದ್ದು, ಪೂರೈಕೆ ಸರಪಳಿಗಳು ಬಲವಾಗುತ್ತಿವೆ. ಭಾರತದ ರಫ್ತು ಗುರಿಗಳಿಗೆ ಹೊಸ ಶಕ್ತಿ ಸಿಗುತ್ತಿದೆ. 

ಆಪಲ್ ಭಾರತದ ತನ್ನ ಉತ್ಪಾದನೆಯನ್ನು ವೇಗವಾಗಿ ವಿಸ್ತರಿಸುತ್ತಿದ್ದು, “ಭಾರತವೇ ವಿಶ್ವದ ಐಫೋನ್ ರಾಜಧಾನಿಆಗುವ ಹಾದಿಯಲ್ಲಿ ನಮ್ಮಬೆಂಗಳೂರು ನಿರ್ಣಾಯಕ ಪಾತ್ರ ವಹಿಸಲಿದೆ.



ಆರಂಭಿಕ ಸವಾಲುಗಳಿದ್ದರೂ, ಫಾಕ್ಸ್ ಕಾನ್ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರಿಯುತ್ತಿದೆ. ಇದರೊಂದಿಗೆ ಕರ್ನಾಟಕದ ಬಲಿಷ್ಠ ಕೈಗಾರಿಕಾ ಪರಿಸರದ ಮೇಲೆ ಹೂಡಿಕೆದಾರರ ವಿಶ್ವಾಸ ಮತ್ತಷ್ಟು ವೃದ್ಧಿಯಾಗುತ್ತಿದೆ ಎಂದು ಕೈಗಾರಿಕೆ ಸಚಿವ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ