Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅಮಿತ್ ಶಾ ರಿಂದ ಅನ್ಯಾಯ ನಿರೀಕ್ಷೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ
, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದು ಸಿಎಂ ಆಗ್ರಹ ಮಾಡಿದ್ದಾರೆ.

ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎನ್ನುವುದು ನಮಗೆ ಸ್ಪಷ್ಟವಾಗಿ ಅರ್ಥವಾಗಿದೆ. ಈ ಅನ್ಯಾಯವನ್ನು ತಪ್ಪಿಸಲಿಕ್ಕಾಗಿಯೇ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಹಿಂದಿನ ಎರಡು ಕ್ಷೇತ್ರ ಮರುವಿಂಗಡಣೆಗೆ 1971ರ ಜನಗಣತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗಿತ್ತು.

ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿರುವುದು ಮಾತ್ರವಲ್ಲ, ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆಯ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಮಾತ್ರವಲ್ಲ, ಅಭಿವೃದ್ದಿಯ ಹಾದಿಯಲ್ಲಿ ಇನ್ನೂ ಕುಂಟುತ್ತಾ ಸಾಗಿದೆ ಎಂದು ಸಿಎಂ ಟೀಕಿದ್ದಾರೆ.

ಇದರಿಂದಾಗಿ ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಒಂದೋ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು.

ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳೇ ನಷ್ಟ ಅನುಭವಿಸಲಿದೆ ಎನ್ನುವುದು ಗೃಹಸಚಿವ ಅಮಿತ್ ಶಾ ಅವರಿಗೆ ತಿಳಿದಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕ್ಷೇತ್ರ ಮರುವಿಂಗಡಣೆಯ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನಗಳು ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (
2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42 ರಿಂದ 34, ಕೇರಳದ ಸಂಖ್ಯೆ 20 ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39 ರಿಂದ 31ಕ್ಕೆ ಇಳಿಯಲಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80 ರಿಂದ 91, ಬಿಹಾರದ ಸಂಖ್ಯೆ 40 ರಿಂದ 50, ಮಧ್ಯಪ್ರದೇಶದ ಸಂಖ್ಯೆ 29 ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ? ಎಂದು ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ ಒಂದೋ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು ಎಂದು ಸಿಎಂ ತಾಕೀತು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಅತ್ಯುತ್ಸಾಹವನ್ನು ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಎಂದು ಸಿದ್ದರಾಮಯ್ಯ ಸಂಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸದೆ ಇದ್ದರೆ ರಾಜ್ಯಕ್ಕೆ ನರೇಂದ್ರ ಮೋದಿ ಅವರ ಆಶೀರ್ವಾದ ಇರುವುದಿಲ್ಲ ಎಂದು ವಿಧಾನಸಭಾ ಚುನಾವಣಾ ಪ್ರಚಾರದ ಕಾಲದಲ್ಲಿ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೀಡಿದ್ದ ಎಚ್ಚರಿಕೆ ನಮ್ಮ ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಒಂದೊಂದು ಕ್ರಮದಲ್ಲಿಯೂ ನಿಜವಾಗುತ್ತಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

ತೆರಿಗೆ ಹಂಚಿಕೆ, ಜಿಎಸ್ ಟಿ  ಮತ್ತು ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ರಾಜ್ಯಕ್ಕೆ ಕಂಟಕವಾಗಿರುವ ಹೊಸ ಶಿಕ್ಷಣ ನೀತಿ ಮತ್ತು ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಈ ಎಲ್ಲ ಅನ್ಯಾಯದ ವಿರುದ್ಧ ರಾಷ್ಟ್ರಮಟ್ಟದಲ್ಲಿ ದನಿ ಎತ್ತದಂತೆ ಮಾಡಲು ಸಂಸತ್ ನಲ್ಲಿ ದಕ್ಷಿಣದ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಈಗ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರವನ್ನು ಎತ್ತಿಕೊಂಡು ಹೊರಟಿದೆ. ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನೋಡಿಯೂ ರಾಜ್ಯದಿಂದ ಲೋಕಸಭೆಗೆ ಆರಿಸಿಹೋಗಿರುವ ಹದಿನೇಳು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸದಸ್ಯರು ಜೀತದಾಳುಗಳಂತೆ ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ರಾಜ್ಯದ ಕರ್ನಾಟಕ ಬಿಜೆಪಿ ಪಕ್ಷದ ನಾಯಕರು ಪರಸ್ಪರ ಕೆಸರೆರಚಾಟ ನಡೆಸುತ್ತಾ ಬೀದಿ ಜಗಳದಲ್ಲಿ ಮಗ್ನರಾಗಿದ್ದಾರೆ.

 ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ ಪಕ್ಷ -ಪಂಥಗಳ ಭೇದವನ್ನು ಮರೆತು ಕನ್ನಡಿಗರೆಲ್ಲರೂ ಒಂದಾಗಿ ಒಂದೇ ದನಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ದನಿ ಎತ್ತಬೇಕಾಗಿದೆ. ಈ ಅನ್ಯಾಯದ ವಿರುದ್ದ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ