Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಯ ಉಪಾಧ್ಯಕ್ಷೆಯಾಗಿ ಕವಿತಾ ಬೋರಯ್ಯ ಅವಿರೋಧ ಆಯ್ಕೆ

Advertisement
 ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರಸಭೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾ ಭರಮಣ್ಣ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ  ಚುನಾವಣೆಯಲ್ಲಿ ಕವಿತಾ ಬೋರಯ್ಯ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಮಹಿಬೂಬ್‌ ಜೀಲಾನಿ ಕಾರ್ಯನಿರ್ವಹಿಸಿದರು.


ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚಳ್ಳಕೆರೆ ನಗರದ ೬ನೇ ವಾರ್ಡ್ ಸದಸ್ಯ ಕವಿತಾ ಬೋರಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆಯಾರೂ ನಾಮಪತ್ರ ಸಲ್ಲಿಸಿದ ಕಾರಣ ಕವಿತಾಬೋರಯ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಘೋಷಿಸಿದರು.

ಉಪಾಧ್ಯಕ್ಷರಾಗಿ ಕವಿತಾಬೋರಯ್ಯ ಹೆಸರು ಘೋಷಣೆಯಾಗುತ್ತಲೇ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಅಧ್ಯಕ್ಷೆ ಆರ್.ಮಂಜುಳಾ
, ಸದಸ್ಯರಾದ ಸುಮಾ, ಸುಜಾತ, ಸುಮಕ್ಕ, ಜೈತುಂಬಿ, ಶಿಲ್ಪ, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಹೊಯ್ಸಳಗೋವಿಂದ, ವಿರೂಪಾಕ್ಷ, ಎಂ.ಜೆ.ರಾಘವೇಂದ್ರ, ಶಿವಕುಮಾರ್, ನಾಮಿನಿ ಸದಸ್ಯರಾದ ಬಡಗಿಪಾಪಣ್ಣ, ಆರ್.ವೀರಭದ್ರಪ್ಪ, ನಟರಾಜ್, ಅನ್ವರ್‌ಮಾಸ್ಟರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣ, ಆರ್.ಪ್ರಸನ್ನಕುಮಾರ್, ಮಹಿಳಾಘಟಕದ ಅಧ್ಯಕ್ಷೆ ಗೀತಾಬಾಯಿ, ರುದ್ರಮುನಿ, ಪ್ರಹ್ಲಾದ್, ಬೋರಯ್ಯ ಮುಂತಾದವರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದರು. 

ನಗರದ ಶಾಸಕರ ಭವನದಲ್ಲಿ ಶಾಸಕ ಟಿ.ರಘುಮೂರ್ತಿಯವರನ್ನು ಭೇಟಿ ಮಾಡಿದ ನೂತನ ಉಪಾಧ್ಯಕ್ಷೆ ಕವಿತಾ ಬೋರಯ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಹಕಾರ ನೀಡಿದ್ದಕ್ಕೆ ಜಿಲ್ಲಾ ಹಾಗೂ ಕ್ಷೇತ್ರ ಮಟ್ಟದ ಎಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.



ಶಾಸಕ ಟಿ.ರಘುಮೂರ್ತಿಯವರು ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷ ಸ್ಥಾನ ನೀಡಿದ್ದು ಶಾಸಕರು ಹಾಗೂ ಪಕ್ಷದ ಗೌರವ ಘನತೆ ಎತ್ತಿಹಿಡಿಯುವ ಕಾರ್ಯ ಮಾಡುವುದಾಗಿ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ