Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತ ಅಜಿತ್ ಹನುಮಕ್ಕನವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಕೊಡ ಮಾಡುವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸುವರ್ಣ ನ್ಯೂಸ್ ಮುಖ್ಯ ಸಂಪಾದಕರಾದ ಅಜಿತ್ ಹನುಮಕ್ಕನವರ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಿದ್ದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಎಂದೂ ಮರೆಯಲಾಗದ, ಅಚ್ಚುಕಟ್ಟಾಗಿ ಸಂಘಟಿಸಿದ ಉತ್ತಮ ಸಮ್ಮೇಳನವಾಗಿತ್ತು ಎಂದರು.
ನಾನು ಗೋಷ್ಠಿಯಲ್ಲಿ ಭಾಗವಹಿಸಿದ ಬಳಿಕ ಅನಿವಾರ್ಯ ಕಾರಣಗಳಿಂದ ತುರ್ತಾಗಿ ತೆರಳಬೇಕಾಗಿತ್ತು. ಹಾಗಾಗಿ ಪ್ರಶಸ್ತಿ ಸ್ವೀಕಾರ ಮಾಡಲು ಸಾಧ್ಯವಾಗಿರಲಿಲ್ಲ ಎಂದರು.

ರಾಜಕೀಯ ವಿಶ್ಲೇಷಣೆಗಾರ ಮತ್ತು ಹಿರಿಯ ಪತ್ರಕರ್ತ ಪ್ರಶಾಂತು ನಾಥು ಮಾತನಾಡಿ, ರಾಜ್ಯ ಪತ್ರಕರ್ತರ ಸಂಘವು, ನಿಜ ಅರ್ಥದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘವಾಗಿಯೇ ಕಾರ್ಯ ನಿರ್ವಹಣೆ ಮಾಡುತ್ತಿರುವುದು ವೃತ್ತಿ ಬಾಂಧವರಿಗೆ ಗೌರವದ ಸಂಗತಿ ಎಂದರು.

ಐಎ್ಡಬ್ಲೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಶಿವಮೊಗ್ಗ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ್, ಸಾಗರದ ಮಹೇಶ್ ಹೆಗಡೆ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ