Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬರ, ಭದ್ರಾ, ಗ್ಯಾರಂಟಿ ಪರಿಶೀಲನೆ ಮಾಹಿತಿ ಸಿದ್ದವಾಗಿಟ್ಟುಕೊಳ್ಳಿ- ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ.  ಬರ ನಿರ್ವಹಣೆ, ಕುಡಿಯುವ ನೀರು, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಪಂಚ ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳ ಪರಿಶೀಲನೆ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸಿದ್ದವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. 

ಪ್ರಗತಿ ಪರಿಶೀಲನಾ ಸಭೆಯ ಅಂತಿಮ ಸಿದ್ದತೆಗಳ ಕುರಿತು ಶುಕ್ರವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

Advertisement

ಈಗಾಗಲೇ ಬೆಂಗಳೂರು ವಿಭಾಗ ಮಟ್ಟದ 9 ಜಿಲ್ಲೆಗಳ ವಿಪತ್ತು ನಿರ್ವಹಣೆ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಜಲಜೀವನ್ ಮಿಷನ್, ನಗರಾಭಿವೃದ್ಧಿ, ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಅರಣ್ಯ ಹಾಗೂ ಪೊಲೀಸ್ ಇಲಾಖೆಗಳ ಮಾಹಿತಿಗಳನ್ನು ಈಗಾಗಲೇ ಸರ್ಕಾರದಿಂದ ಸಂಗ್ರಹಿಸಿಲಾಗಿದೆ. ಇದರ ಹೊರತಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ  ಭದ್ರಾ ಮೇಲ್ದಂಡೆ ಯೋಜನೆಯಡಿ ನೀರಾವರಿ ವಿಸ್ತರಣೆ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನ ಸೆಳೆಯಬಹುದು. ಈ ಹಿನ್ನಲೆಯಲ್ಲಿ ಹೊಳಲ್ಕೆರೆ, ಹಿರಿಯೂರು ತಾಲ್ಲೂಕುಗಳ ಪ್ರದೇಶಗಳನ್ನು ನೀರಾವರಿ ಯೋಜನೆಗೆ ಒಳಪಡಿಸುವ ಕುರಿತು ಸಲ್ಲಿಸಲಾದ ಪ್ರಸ್ತಾವನೆಗಳ ವಿವರಗಳನ್ನು ನೀಡಿದರೆ, ಸಭೆಯಲ್ಲಿ ಉತ್ತರಿಸಲು ಅನುವಾಗುತ್ತದೆ.

ಜಿಲ್ಲೆಯಲ್ಲಿ ಜಾನುವಾರುಗಳ ಸಂಖ್ಯೆ ಅನುಗುಣವಾಗಿ  ಲಭ್ಯ ಇರುವ ಮೇವು ಸಂಗ್ರಹಣೆ ವಿವರಗಳನ್ನು ಅಧಿಕಾರಿಗಳು ನೀಡುವುದರ ಜೊತೆಗೆ, ಜಿಲ್ಲೆಯಲ್ಲಿ 88,740 ಹೆಕ್ಟೇರ್ ಗೋಮಾಳ ಹಾಗೂ 8552 ಹೆಕ್ಟೇರ್ ಅಮೃತ್ ಕಾವಲ್ ಪ್ರದೇಶಗಳು ಇರುವುದನ್ನು ತಮ್ಮ ಮಾಹಿತಿಯಲ್ಲಿ ನೀಡಬೇಕು. ಈಗಾಗಲೇ ಜಿಲ್ಲೆಯಲ್ಲಿ ವಿತರಿಸಿರುವ ಮೇವು ಕಿಟ್ ಹಾಗೂ ಸರ್ಕಾರಕ್ಕೆ ಸಲ್ಲಿಸಿರುವ ಮೇವು ಕಿಟ್ ವಿವರಗಳನ್ನು ಸಹ ನೀಡಿಸಬೇಕು.

ಕೃಷಿ ಇಲಾಖೆ ಸಂಬಂಧಿಸಿದಂತೆ ಮುಂಗಾರು ಕೊರತೆಯಿಂದ ಜಿಲ್ಲೆಯಲ್ಲಿ 13.73 ಲಕ್ಷ ಹೇಕ್ಟರ್ ಪೈಕಿ ಬಿತ್ತನೆ ಗುರಿ ಪೈಕಿ ಇದುವರೆಗೆ ಎಷ್ಟು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಹಾಗೂ ಹಂಚಿಕೆ ಕುರಿತು ಮಾಹಿತಿ ನೀಡಿ.

ಸದ್ಯ ಶುದ್ದ ಕುಡಿಯುವ ನೀರಿನ ಘಟಕ, ಕುಡಿಯುವ ನೀರು ಸರಬರಾಜು, ಜಲಜೀವನ್ ಮಿಷಿನ್ ಕಾಮಗಾರಿ ಪ್ರಗತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕಾರ್ಯಾತ್ಮಕ ನಳ ಸಂಪರ್ಕ, ಕುಡಿಯುವ ನೀರಿನ ಸಂಕಷ್ಟ  ಎದುರಾಗಿರುವ ಹಳ್ಳಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಹಳ್ಳಿಗಳ ಕುರಿತು ನೀಡುವ ವಿವರಗಳು ಸ್ಪಷ್ಟವಾಗಿರಬೇಕು. ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ದಾಖಲಾತಿ ಪ್ರಮಾಣ, ವಿದ್ಯಾರ್ಥಿಗಳ ನಿರಂತರ ಹಾಜರಾತಿಯಲ್ಲಿ ಕುಂಠಿತವಾಗಿರುವುದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಹೇಳಿದರು.

ಇದರೊಂದಿಗೆ ಪ್ರಗತಿ ಪರಿಶೀಲನೆ ಸಭೆಯ ಆಯೋಜನೆಗೆ ರಚಿಸಿದ ಸಮಿತಿಗಳ ಅಧಿಕಾರಿಗಳು ಇಂದೇ ಅಗತ್ಯ ಸಿದ್ದತೆಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರು ಇದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು