Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಂಪೇಗೌಡರು ದೂರ ದೃಷ್ಟಿಯ ಆಡಳಿತಗಾರ-ಚಿಕ್ಕಣ್ಣ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೆಂಪೇಗೌಡರು ಕೇವಲ ಒಬ್ಬ ರಾಜನಷ್ಟೇ ಅಲ್ಲ
, ಉತ್ತಮ ಆಡಳಿತಗಾರ, ಸಮಾಜಮುಖಿ ನಾಯಕ ಮತ್ತು ದೂರದೃಷ್ಟಿಯ ನಗರ ನಿರ್ಮಾಣಕಾರರಾಗಿದ್ದರು, ಕರ್ನಾಟಕದ ಹೆಮ್ಮೆಯ ನಾಯಕ, ದೂರದೃಷ್ಟಿಯ ಆಡಳಿತಗಾರ ಎಂದು ಎನ್. ಎಸ್. ಎಸ್ ಅಧಿಕಾರಿ ಡಾ.ಎಂ ಚಿಕ್ಕಣ್ಣ ಹೇಳಿದರು. 

ನಗರದ ಹೊರವಲಯದ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ದೇವರಾಜ್ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಂಪೇಗೌಡ ಅವರು ಬೆಳೆಸಿದ ಬೆಂಗಳೂರು ಇಂದು ವಿಶ್ವದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿ ಬೆಳೆದಿದೆ, ಕೆರೆಗಳು, ಉದ್ಯಾನಗಳು, ದೇವಾಲಯಗಳು ಹಾಗೂ ಜನಸ್ನೇಹಿ ಆಡಳಿತಕ್ಕೆ ಅವರು ನೀಡಿದ ಮಹತ್ವ ಇಂದಿಗೂ ನಮಗೆ ಆದರ್ಶವಾಗಿದೆ,ಕೆಂಪೇಗೌಡರ ಜೀವನವು ನಮಗೆ ಶಿಸ್ತು, ಪ್ರಾಮಾಣಿಕತೆ, ಜನಸೇವೆ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಕಲಿಸುತ್ತದೆ. ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣಕ್ಕೂ ಅವರು ಸಮಾನ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಫಲವನ್ನು ನಾವು ಇಂದಿಗೂ ಅನುಭವಿಸುತ್ತಿದ್ದೇವೆ ಎಂದರು. ‌ಉಪಪ್ರಾಂಶುಪಾಲ ಕೆ. ದಕ್ಷಿಣ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಸಿ.ಪಿ ಪ್ರಕಾಶ್,  ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಮಧುಶ್ರೀ ಸಂಶೋಧನಾ ವಿಭಾಗದ ಸಂಚಾಲಕ ನೀರಜ್, ಸಹಾಯಕ ಎನ್.ಎಸ್.ಎಸ್ ಅಧಿಕಾರಿಗಳಾದ ರಮ್ಯಶ್ರೀ, ವೆಂಕಟೇಶ್ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತಿತರರು ಹಾಜರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ