Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂಡಿಯನ್ ಫ್ರೈಡ್ ಶಾಲೆಯಲ್ಲಿ ಕೆಂಪೇಗೌಡ ಜಯಂತಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಮತ್ತು ಪ್ರಜಾಹಿತ ಚಿಂತನೆಯ ಮೂಲಕ‌ಜನಸ್ನೇಹಿ‌ಆಡಳಿತ ನೀಡಿದವರು ಎಂದು ಇಂಡಿಯನ್ ಪ್ರೈಡ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಯಭಾರತಿ ಅರವಿಂದ್ ತಿಳಿಸಿದರು.

 ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇಂಡಿಯನ್ ಪ್ರೈಡ್  ವಿದ್ಯಾಸಂಸ್ಥೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು..ಕೆಂಪೇಗೌಡ ಅವರ ಆಡಳಿತ ವ್ಯವಸ್ಥೆ ಮತ್ತು ಅಭಿವೃದ್ಧಿ ಕಾರ್ಯಗಳು ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿವೆ. ಸಮಾನತೆ ಮತ್ತು ಜನಸ್ನೇಹಿ ಆಡಳಿತ ಮಾದರಿಯು ಇಂದಿಗೂ ಆದರ್ಶವಾಗಿದೆ ಎಂದರು.

Advertisement

 ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಬೆಂಗಳೂರನ್ನು ಶತಮಾನಗಳ ಹಿಂದೆಯೇ  ಮಾದರಿಯ ನಗರವಾಗಿಸಲು  ಯೋಜನೆಯನ್ನು ರೂಪಿಸಿದ  ಕೆಂಪೇಗೌಡ,  ಕೃಷಿ ಮತ್ತು ವ್ಯಾಪಾರ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.  ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ   ಹಲವಾರು ಕೆರೆಗಳು,  ಕೋಟೆಗಳು  ಹಾಗೂ ವ್ಯಾಪಾರಕ್ಕೆ ಪ್ರತ್ಯೇಕ ಪೇಟೆಗಳು   ಕೆಂಪೇಗೌಡ ಅವರ ಅಭಿವೃದ್ಧಿ ಜಾರ್ಯಗಳಿಗೆ ಸಾಕ್ಷಿಯಾಗಿವೆ. ಬೆಂಗಳೂರು ನಗರದ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲು  ನಾಡಪ್ರಭು ಕೆಂಪೇಗೌಡರ  ದೂರದೃಷ್ಟಿಯ ಯೋಜನೆಗಳು ಪ್ರಮುಖ ಕಾರಣವಾಗಿದೆ. ಎಂದರು.

  ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ಮಾತನಾಡಿ, ಕೆಂಪೇಗೌಡ ಅವರ ಆಡಳಿತದಲ್ಲಿದ್ದ ಜನಪರ ಕಾಳಜಿ, ಸಾಮಾಜಿಕ ನ್ಯಾಯ ಮತ್ತು ಪರಿಸರ ಪ್ರೀತಿ ಅನನ್ಯವಾದದ್ದು.  ಅವರು ಹಂಪಿಯಂತಹ ನಾಡು ಕಟ್ಟಬೇಕೆಂದು ಕನಸು ಕಂಡವರು. ಬೆಂಗಳೂರನ್ನು ದಕ್ಷಿಣ ಭಾರತದ ವ್ಯಾಪಾರ ಕೇಂದ್ರ ಮಾಡಿದರು. ಕೆಂಪೇಗೌಡ ಅವರು ಸರ್ವಧರ್ಮ ಸಮನ್ವಯ ಸಾಧಿಸಿದವರು ಎಂದರು.

ಇದೇ ಸಂದರ್ಭದಲ್ಲಿ ಕೆಂಪೇಗೌಡರ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಎಸ್.ಸೃಜನ,  ಗಾನವಿ, ಯಶಿಕ, ನಾಗಲಕ್ಷ್ಮಿ ಹಾಗೂ ಕೆಂಪೇಗೌಡರ ಛದ್ಮವೇಷ ಧರಿಸಿದ ಪ್ರಜ್ವಲ್ ಗೌಡ ವಿದ್ಯಾರ್ಥಿಗಳಿಗೆ  ಬಹುಮಾನ  ಮತ್ತು ಪ್ರಶಸ್ತಿಪತ್ರ ನೀಡಿ ಅಭಿನಂದಿಸಿದರು.

ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್,  ಗೌರವ ಕಾರ್ಯದರ್ಶಿ ಎ.ಜಯರಾಮ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ನಿಲಯ ಮೇಲ್ವಿಚಾರಕ ಸಿ.ಅಣ್ಣಯ್ಯ, , ಕಲಾವಿದರುಗಳಾದ  ದರ್ಗಾಜೋಗಿಹಳ್ಳಿ ಮಲ್ಲೇಶ್, ರಂಗಸ್ವಾಮಯ್ಯ, ಹಾಡೋನಹಳ್ಳಿ ಗೋವಿಂದರಾಜು  ಮುಂತಾದವರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ