ಚಂದ್ರವಳ್ಳಿ ನ್ಯೂಸ್, ಮುಳಬಾಗಿಲು:
ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ 517ನೇ ಜಯಂತ್ಯುತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಂಭ್ರಮದ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಶ್ರೀ ಗುರುಗುಂಡಾ ಬ್ರಹ್ಮೇಶ್ವರಸ್ವಾಮಿ ಮಠದ ಜಗದ್ಗುರು ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಮಹಾಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸಂಸದ ಎಂ. ಮಲ್ಲೇಶ್ ಬಾಬು, ಶಾಸಕ ಸಮೃದ್ಧಿ ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಜಿ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಹಾಗೂ ಮಾಜಿ ಎಂಎಲ್‌ಸಿ ಚೌಡರೆಡ್ಡಿ ತೂಪಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ನಾಡಪ್ರಭು ಕೆಂಪೇಗೌಡರ ಅಪಾರ ಅಭಿಮಾನಿಗಳು ಮುಖಂಡರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.




