LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಜಯಂತಿ: ಮಹಿಳೆಯರನ್ನು ಸಂಪೂರ್ಣ ಕಡೆಗಣಿಸಿದ ತಾಲೂಕು ಆಡಳಿತ; ಮಾನಸ ಮಂಜುನಾಥ್ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಕರಾದ ತಾಲೂಕು ಆಡಳಿತವು ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಮನವಿ ಟ್ರಸ್ಟ್ ಸಂಸ್ಥಾಪಕರಾದ ಮಾನಸ ಮಂಜುನಾಥ್ ತೀವ್ರ ಆರೋಪ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದ ವ್ಯವಸ್ಥೆ ಹಾಗೂ ತಾಲೂಕು ಆಡಳಿತದ ಧೋರಣೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೇದಿಕೆಯಲ್ಲಿ ಪುರುಷರದ್ದೇ ಕಾರುಬಾರು: ಕಾಟಾಚಾರದ ಆಹ್ವಾನ:
"
ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ತಮಗೆ ತೋಚಿದಂತೆ ಹೋಗಿ ಲಭ್ಯವಿದ್ದ ಕುರ್ಚಿಗಳಲ್ಲಿ ಆಸೀನರಾದರು. ಸ್ವಾಗತ ಭಾಷಣದ ವೇಳೆಯೂ ಸಭಾಂಗಣದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರೂ, ಕೇವಲ ಕಾಟಾಚಾರಕ್ಕೆ ಎಂಬಂತೆ ಒಂದಿಬ್ಬರನ್ನು ಮಾತ್ರ ಆಹ್ವಾನಿಸಲಾಯಿತು. ಒಕ್ಕಲಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷರಾದ ಮಮತಾ ಅವರನ್ನು ಅತ್ಯಂತ ನಿರ್ಲಕ್ಷ್ಯದಿಂದ ಕೊನೆಯಲ್ಲಿ ಕರೆದು ಕೂರಿಸಲಾಯಿತು. ಇಡೀ ವೇದಿಕೆ ತುಂಬಾ ಪುರುಷರೇ ತುಂಬಿಕೊಳ್ಳುವುದಾದಾರೆ, ಮಹಿಳೆಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಅಗತ್ಯವಾದರೂ ಏನಿತ್ತು?" ಎಂದು ಅವರು ಪ್ರಶ್ನಿಸಿದ್ದಾರೆ.

ಸಾಧಕರಿಗೆ ಸಿಗದ ಮನ್ನಣೆ:
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಕಷ್ಟು ಮಹಿಳೆಯರು ಮತ್ತು ಪುರುಷರು ಕಾರ್ಯಕ್ರಮದಲ್ಲಿ ಹಾಜರಿದ್ದರೂ ಸಹ, ಅವರನ್ನು ಕನಿಷ್ಠ ಪಕ್ಷ ಸ್ವಾಗತಿಸುವ, ಆಹ್ವಾನಿಸುವ ಅಥವಾ ಗುರುತಿಸುವ ಸೌಜನ್ಯವನ್ನು ಆಯೋಜಕರು ತೋರಲಿಲ್ಲ ಎಂದು ಅವರು ದೂರಿದ್ದಾರೆ.

"ಮಹಾಪುರುಷರು ಎಲ್ಲರಿಗೂ ಮಾದರಿ":
"
ಮಹಾಪುರುಷರ ಜಯಂತಿ ಕಾರ್ಯಕ್ರಮಗಳನ್ನು ಕೇವಲ ಒಂದು ನಿರ್ದಿಷ್ಟ ಜನಾಂಗಕ್ಕೆ ಸೀಮಿತಗೊಳಿಸದೆ, ಎಲ್ಲಾ ವರ್ಗದ ಜನರನ್ನು ಆಹ್ವಾನಿಸಬೇಕು. ಆ ಮಹನೀಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂಬುದನ್ನು ಹಲವು ಬಾರಿ ಮನವಿ ಮಾಡಿದ್ದರೂ ಸಹ ತಾಲೂಕು ಆಡಳಿತವು ಪದೇ ಪದೇ ಅದೇ ತಪ್ಪುಗಳನ್ನು ಮರುಕಳಿಸುತ್ತಿದೆ."
ಮಾನಸ ಮಂಜುನಾಥ್, ಸಂಸ್ಥಾಪಕರು, ಮನವಿ ಟ್ರಸ್ಟ್.

ಸಮಿತಿಗೆ ಎಚ್ಚರಿಕೆ:
ಮುಂದಿನ ದಿನಗಳಲ್ಲಿ ಯಾವುದೇ ಜಯಂತಿ ಅಥವಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇಂತಹ ಮಹಿಳಾ ವಿರೋಧಿ ವರ್ತನೆಗಳು ಮರುಕಳಿಸಬಾರದು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಈ ಬಗ್ಗೆ ತೀವ್ರ ಜಾಗ್ರತೆ ವಹಿಸಬೇಕು ಮತ್ತು ಎಲ್ಲರಿಗೂ ಸಮಾನ ಗೌರವ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮಾನಸ ಮಂಜುನಾಥ್ ಆಗ್ರಹಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ