Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಎಚ್. ಮುನಿಯಪ್ಪ ಅವರಿಗೆ

ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೀಡಿ ಮಾದಿಗ ಸಮುದಾಯಕ್ಕೆ ಬೇಸವನ್ನುಂಟು ಮಾಡಿದ್ದಾರೆ, ಅವರ ಹಿರಿತನಕ್ಕೆ ಸಮಾಜ ಕಲ್ಯಾಣ ಅಥವಾ ಗೃಹ ಖಾತೆಯನ್ನು ನೀಡುವಂತೆ ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ.ಅಧ್ಯಕ್ಷ ಮನು.ಆರ್.ವಿ. ಒತ್ತಾಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಅವರು ಮಾತನಾಡಿ  ಸಚಿವರಾದ ಕೆ.ಎಚ್.ಮುನಿಯಪ್ಪರವರು  ರಾಜ್ಯದ ನೂತನ ಸರ್ಕಾರದಲ್ಲಿ ಹಿರಿಯ ಅನುಭವಿಗಳಾಗಿದ್ದಾರೆ.ಇವರಿಗೆ ಉನ್ನತ ಮಂತ್ರಿ ಸ್ಥಾನ ನೀಡುವ ಮೂಲಕ ಮಾದಿಗ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿದರು.

ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪರಿಶಿಷ್ಟ ಜಾತಿ ಎಸ್‌ಸಿ (ಎಡ) ಸಮುದಾಯದ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರಿಗೆ ಮನವಿ ಸಲ್ಲಿಸಿಲಾಗಿತ್ತು. ಅದರೆ ಕೆ ಹೆಚ್.ಮುನಿಯಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಎಂಬುದು ಸಮುದಾಯ ಆಶಯವಿತ್ತು. ಆಹಾರ ಖಾತೆಯನ್ನು ಮುಂದುವರೆಸುವ ಬದಲು, ಸಮಾಜ ಕಲ್ಯಾಣ ಇಲಾಖೆ ಅಥವಾ ಗೃಹ ಖಾತೆಯನ್ನು ಕೆ.ಹೆಚ್.ಮುನಿಯಪ್ಪನವರಿಗೆ. ನೀಡಬೇಕಿತ್ತು.

ಮಾದಿಗ ಸಮಾಜದ ಸರ್ವೋಚ್ಚ ನಾಯಕರಾಗಿರುವ  ಕೆ.ಹೆಚ್.ಮುನಿಯಪ್ಪ ರವರು ಕಾಂಗ್ರೆಸ್ ಪಕ್ಷಕ್ಕಾಗಿ ಅಹರ್ನಿಷಿ ದುಡಿದಿದ್ದಾರೆ. ಕೇಂದ್ರ ಸರ್ಕಾರದಲ್ಲಿ 7 ಬಾರಿ ಸಂಸದರಾಗಿ, ರೈಲ್ವೆ ಖಾತೆ ಸಚಿವರಾಗಿದ್ದವರು. ಕೆ.ಹೆಚ್.ಎಂ.ರವರಿಗೆ ಉತ್ತಮ ಸ್ಥಾನ ನೀಡದೆ ಇರುವುದು ಸಮುದಾಯಕ್ಕೆ  ಅನ್ಯಾಯವಾಗಿದೆ. ಅದರಿಂದ ಮುಂದಿನ ದಿನಗಳಲ್ಲಿ ಅವರ ಹಿರಿತನಕೆ ತಕ್ಕ ಖಾತೆ ನೀಡಲೆ ಬೇಕು ಇದು ನಮ್ಮ ಸಮಾಜದ ಹಾಕ್ಕೊತ್ತಾಯವಾಗಿದೆ. ಈ ಬಗ್ಗೆ

ರಾಜ್ಯ ರಾಷ್ಟ್ರ ನಾಯಕರಾದ ಸಿಎಂ ಡಿ.ಕೆ.ಶಿವಕುಮಾರ್  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಲಾ ರವರು ತುರ್ತು ಗಮನ ಹರಿಸಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನು ಆರ್.ವಿ. ಮನವಿ ಮಾಡಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!