Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಮದಲ್ಲಿ ಖೇತ್ ಬಚಾವೋ ಅಭಿಯಾನ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಂಟನಕುಂಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮಯೋಜನೆಯಡಿ ಖೇತ್‌ಬಚಾವೋ ಅಭಿಯಾನದ ಅಂಗವಾಗಿ ಸಮತೋಲನ ರಸಗೊಬ್ಬರಗಳ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ ಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಂಪನ್ಮೂಲ  ವ್ಯಕ್ತಿಗಳಾಗಿ  ಭಾಗವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಬಾಲಾಜಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ, ಮಣ್ಣಿನ ಫಲವತ್ತತೆ ಕುಸಿತ ಹಾಗೂ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ವೈಜ್ಞಾನಿಕ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು  ಭವಿಷ್ಯದ ಪೀಳಿಗೆಯ ಅಗತ್ಯತೆಗಳಿಗೆ ಧಕ್ಕೆಯಾಗದಂತೆ, ಲಭ್ಯವಿರುವ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಿ, ಪರಿಸರಕ್ಕೆ ಹಾನಿಯಾಗದಂತೆ ದೀರ್ಘಕಾಲೀನ ಕೃಷಿ ಉತ್ಪಾದನೆಯನ್ನು ಮಾಡುವುದು.

Advertisement

ಇದು ರೈತರ ಆದಾಯವನ್ನು ಹೆಚ್ಚಿಸುವುದು ರೈತರು ರಾಸಾಯನಿಕ ಗೊಬ್ಬರಗಳನ್ನು ಅತಿಯಾಗಿ ಬಳಸದೇ ಮಣ್ಣಿನ ಆರೋಗ್ಯ ಕಾಪಾಡಲು ಮಣ್ಣು ಪರೀಕ್ಷೆ ಆಧಾರಿತ ಸಮತೋಲಿತ ರಸಗೊಬ್ಬರಗಳನ್ನು ಮತ್ತು ಜೈವಿಕ ಗೊಬ್ಬರಗಳನ್ನು ಬಳಸಬೇಕು. ರಾಸಾಯನಿಕ ಗೊಬ್ಬರಗಳ ಹೆಚ್ಚಿನ ಅವಲಂಬನೆ ತಪ್ಪಿಸಿ, ಮಣ್ಣಿನ ಆರೋಗ್ಯಕ್ಕೆ ಪೂರಕವಾಗಿ ರಸಗೊಬ್ಬರಗಳನ್ನು ಬಳಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಡೋನಹಳ್ಳಿ, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಅರ್ಚನಾ, ಕೊಡಿಗೆಹಳ್ಳಿ ವಿ.ಎಸ್.ಎಸ್.ಎನ್ ನ ನಿರ್ದೇಶಕ ಬಸವರಾಜು, ಗ್ರಾಮದ ರೈತ ಮುಖಂಡರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು