Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಕಿಡ್ನಿ ದಾನ ಮಾಡಿದ ಹುಟ್ಟಿಸಿದ ತಂದೆಯವರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾಂಡವಪುರ ತಾಲೂಕಿನ ಚಿಕ್ಕಮರಲಿ ಗ್ರಾಮದ ನಿವಾಸಿ ಕೃಪಾಕರ ಸಿ. ಎನ್  ಎಂಬ 32 ವರ್ಷ ವಯಸ್ಸಿನ ಯುವಕನಿಗೆ ತನ್ನ ತಂದೆಯವರಾದ ಸಿ.ಕೆ ನಿಂಗೇಗೌಡ (59) ಎಂಬುವವರು ಹಾಗೂ ನಾಗಮಂಗಲ ಪಟ್ಟಣದ ಕುಂಬಾರ ಬೀದಿ ನಿವಾಸಿ ಅನ್ಪಾಸ್ ರೆಹಮಾನ್ ಎಂಬ 24 ವರ್ಷ ವಯಸ್ಸಿನ ಯುವಕನಿಗೆ ತನ್ನ ತಂದೆ ಚೋಟೆಸಾಬ್ (59) ಎಂಬುವವರು ಕಿಡ್ನಿ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿರುತ್ತಾರೆ.


ಈ ಅಂಗಾಂಗ ಕಸಿಯನ್ನು ವಿಶ್ವ ಅಂಗಾಂಗ ದಿನಾಚರಣೆಯೊಂದು ಅಂದರೆ ಆಗಸ್ಟ್-13ರ ಬುಧವಾರದಂದು ಆದಿಚುಂಚನಗಿರಿ ಆಸ್ಪತ್ರೆ, ಬಿ ಜಿ ನಗರ, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ ಇಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಖ್ಯಾತ ವೈದ್ಯರಾದ ಡಾ. ನರೇಂದ್ರ, ಡಾ. ಅನಿಲ್ ಹಾಗೂ ಡಾ. ನಂದೀಶ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.  ಹೀಗೆ ಅಂಗಾಂಗ ದಾನ ಮಾಡಿದ ಗ್ರಾಮೀಣ ಭಾಗದ ನಿಂಗೇಗೌಡ ಹಾಗೂ ಚೋಟೆ ಸಾಬ್ ರವರು ಈ ಅಂಗಾಂಗ ದಾನದ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.


ಈ ಎರಡು ಯಶಸ್ವಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪೂಜ್ಯ ಶ್ರೀ ಶ್ರೀ ಸತ್ಕೀರ್ತಿನಾಥ ಸ್ವಾಮೀಜಿರವರು, ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಬಿ ಜಿ ನಗರ, ಡಾ. ಕೆ ಎಂ ಶಿವಕುಮಾರ್, ಮುಖ್ಯಸ್ಥರು, ಆದಿಚುಂಚನಗಿರಿ ಆಸ್ಪತ್ರೆ, ಡಾ. ರವಿ ಕೆ ಎಸ್ ಉಪ-ಮುಖ್ಯಸ್ಥರು ಆದಿಚುಂಚನಗಿರಿ ಆಸ್ಪತ್ರೆ, ಹಾಗೂ

ಶ್ರೀ ಧರ್ಮೇಂದ್ರ ರವರು ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆಯ ಇನ್ನಿತರ ವೈದ್ಯಕೀಯ ಸಿಬ್ಬಂದಿಗಳು ಈ ವಿಶ್ವ ಅಂಗಾಂಗ ದಾನ ದಿನದಂದು ನಡೆದ ಯಶಸ್ವಿ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಹಾಜರಿದ್ದರು.


ಈ ಅಪರೂಪದ ಎರಡು ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಯನ್ನು ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಖುದ್ದು ಹಾಜರಿದ್ದು ಸಂಪೂರ್ಣ ಶಸ್ತ್ರಚಿಕಿತ್ಸೆ ವೀಕ್ಷಣೆ ಮಾಡಿ ಫಲಾನುಭವಿಗಳಿಗೆ ಶುಭ ಹಾರೈಸಿದರು ಹಾಗೂ ಆದಿಚುಂಚನಗಿರಿ ಆಸ್ಪತ್ರೆಯ ಈ ಮಹತ್ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ