LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅಮರ ಸ್ವಾತಂತ್ರ್ಯ ಹೋರಾಟಗಾರರು:ಮಹಾಲಿಂಗಯ್ಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಮರ ಸ್ವಾತಂತ್ರ್ಯ ಹೋರಾಟಗಾರರು.  ಬ್ರಿಟಿಷರ ವಿರುದ್ಧ ಧೀರ ಹೋರಾಟ ನಡೆಸಿದವರು ಮತ್ತು ಕಿತ್ತೂರಿನ ಹೆಮ್ಮೆಯ ಪ್ರತೀಕವಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು.

 ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರದ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ   ಪುಸ್ತಕ ಓದಿ ಬಹುಮಾನ ಗೆಲ್ಲಿ ಸ್ಪರ್ಧೆಗೆ ನಿಗದಿಪಡಿಸಿರುವ ಭಾರತ  ಸ್ವಾತಂತ್ರ್ಯ ಸಂಗ್ರಾಮದ ಕಣ್ಮಣಿಗಳು ಪುಸ್ತಕ ಬಿಡುಗಡೆಗೊಳಿಸಿ  ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರರು ವಿದ್ಯಾರ್ಥಿಗಳಿಗೆ ದೇಶಭಕ್ತಿ, ಶಿಸ್ತು ಮತ್ತು ತ್ಯಾಗದ ಮನೋಭಾವವನ್ನು ಕಲಿಸುವ ಮೂಲಕ ಸದಾ ಸ್ಫೂರ್ತಿಯಾಗಿದ್ದಾರೆ ಎಂದರು.

ಕನ್ನಡ ‌ಜಾಗೃತ ಪರಿಷತ್ತು ಟ್ರಸ್ಟಿ ಮತ್ತು ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮಾತನಾಡಿ,  ಪುಸ್ತಕ ಓದಿ ಬಹುಮಾನ ಗೆಲ್ಲಿ  ಕಾರ್ಯಕ್ರಮದ ಮೂಲಕ  ವಿದ್ಯಾರ್ಥಿಗಳಲ್ಲಿ ಮತ್ತು ಯುವಜನತೆಯಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರನ್ನು ಪರಿಚಯಿಸಲಾಗುತ್ತದೆ.   ಪುಸ್ತಕ ಓದಿ ಬಹುಮಾನ ಗೆಲ್ಲಿ  ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ    ಪುಸ್ತಕ ಪ್ರೀತಿ ಬೆಳೆಸಲು ಸಹಕಾರಿ ಆಗಿದೆ.   ಪುಸ್ತಕಗಳು ಜೀವನವನ್ನು ಪ್ರೇರೇಪಿಸುವ, ಶಿಕ್ಷಣ ನೀಡುವ ಮತ್ತು ಪರಿವರ್ತಿಸುವ ಶಕ್ತಿಯನ್ನು ಹೊಂದಿವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಭಾರತ ಸ್ವಾತಂತ್ರ್ಯ ಸಂಗ್ರಾಮದ ಕಣ್ಮಣಿಗಳು ಎಂಬ ಪುಸ್ತಕ ಓದಿ ಬಹುಮಾನ ಗೆಲ್ಲಿ  ಪರೀಕ್ಷೆ ಇದೇ ಆಗಸ್ಟ್  16 ಭಾನುವಾರ ನಡೆಯಲಿದೆ. ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯುವ ಪರೀಕ್ಷೆಗೆ ಒಂದು ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ ಮಾತನಾಡಿ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಕಣ್ಮಣಿಗಳು ಕೃತಿಯನ್ನು  ದೊಡ್ಡಬಳ್ಳಾಪುರ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಹೆಚ್.ಎನ್.ಪ್ರಕಾಶ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿನಿ ಕವಿತಾ   ಬರೆದಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಜೀವನ ಚರಿತ್ರೆಯನ್ನು ಪುಸ್ತಕ ಹೊಂದಿದೆ.

ಆಗಸ್ಟ್  16 ರಂದು ನಡೆಯುವ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಮತ್ತು ಕನ್ನಡಾಭಿಮಾನಿಗಳು ಸಹಕಾರ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸುಸ್ವರ ಟ್ರಸ್ಟ್ ಗಿರೀಶ್, ಸುಶಿಕ್ಷಕ ಹೆಚ್.ಎನ್.ಪ್ರಕಾಶ್, ವಿದ್ಯಾರ್ಥಿನಿ ಕವಿತಾ ಮುಂತಾದವರು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST