Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಕಾಮಗಾರಿ ವಿಳಂಬ ತೀವ್ರ ಬೇಸರ ವ್ಯಕ್ತಪಡಿಸಿದ ಕೋದಂಡರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ರೈತರು
, ಕಾರ್ಮಿಕರು, ಶ್ರಮಿಕರ ದಶಕಗಳ ಕನಸು ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡು ೧೬ ವರ್ಷ ಪೂರೈಸುತ್ತಿದ್ದರೂ ಕಾಮಗಾರಿ ಪೂರ್ಣಗೊಳ್ಳದಿರುವುದು ಅತ್ಯಂತ ಬೇಸರದ ವಿಷಯ ಎಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ಹೇಳಿದರು.


ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಜಾರಿಯಿಂದ ಲಕ್ಷಾಂತರ ಜನರ ಬದುಕು ಹಸನುಗೊಳ್ಳಲಿದೆ. ಆದರೆ, ಯೋಜನೆ ಜಾರಿ ವಿಷಯದಲ್ಲಿ ಕೇಂದ್ರ-ರಾಜ್ಯ ಸರ್ಕಾರದ ಮಧ್ಯೆ ಇರುವ ಕಂದಕ ಬಯಲುಸೀಮೆ ಜನರನ್ನು ಸಂಕಷ್ಟಕ್ಕೆ ಸಿಲುಕಿದೆ ಎಂದರು.

ಚುನಾವಣೆ ಸಂದರ್ಭ ನರೇಂದ್ರ ಮೋದಿ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಂಬಂಧ ಕೊಟ್ಟ ಮಾತು ಈಡೇರಿಸಬೇಕಿದೆ. ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಯೋಜನೆಗೆ ಘೋಷಿಸಿದ್ದರೂ ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.


ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣಕಾಸಿನ ಪರಿಸ್ಥಿತಿ ಅವಲೋಕಿಸಿದರೆ ಎಲ್ಲವೂ ಕೇಂದ್ರದ ಹಿಡಿತದಲ್ಲಿದೆ. ಅದರಲ್ಲೂ ಈಚೆಗೆ ನರೇಗಾ ಯೋಜನೆ ಹೆಸರು ಬದಲಾವಣೆ ಜೊತೆಗೆ ರಾಜ್ಯ ಸರ್ಕಾರದ ಮೇಲೆ ಹೆಚ್ಚು ಆರ್ಥಿಕ ಹೊರೆ ಹಾಕಲಾಗಿದೆ. ಹೀಗೆ ವಿವಿಧ ರೀತಿ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರದ ಸವಾರಿ ಮಾಡುತ್ತಿದೆ. ಇದರಿಂದ ರಾಜ್ಯಗಳ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ ಎಂದರು.

ಇಂತಹ ವೇಳೆ ರಾಷ್ಟ್ರೀದ ಬಹುದೊಡ್ಡ ಯೋಜನೆ ಆಗಿರುವ ಭದ್ರಾ ಮೇಲ್ದಂಡೆ ಯೋಜನೆ ದಿನದಿಂದ ದಿನಕ್ಕೆ ವೆಚ್ಚ ಹೆಚ್ಚಾಗುತ್ತಿದೆ. ೫ರಿಂದ ೨೧ ಸಾವಿರ ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಇಂತಹ ವೇಳೆ ಕೊಟ್ಟ ಮಾತಿನಂತೆ ಹಾಗೂ ಬಜೆಟ್ ಘೋಷಿಸಿದಂತೆ ಕೇಂದ್ರ ಸರ್ಕಾರ ೫,೩೦೦ ಕೋಟಿ ರೂ. ಬಿಡುಗಡೆ ಮಾಡಿದ್ದರೆ ಕಾಮಗಾರಿ ವೇಗ ಪಡೆದುಕೊಳ್ಳುತ್ತಿತ್ತು ಎಂದು ಹೇಳಿದರು.

ಕಾಮಗಾರಿ ಗುತ್ತಿಗೆ ಪಡೆದಿರುವವರು ತೀವ್ರ ಸಂಕಷ್ಟದಲ್ಲಿದ್ದೂ ಕೆಲಸ ಮುಂದುವರಿಸುತ್ತಿದ್ದಾರೆ. ಅವರುಗಳಿಗೆ ಹಣ ಬಿಡುಗಡೆ ಮಾಡುವುದು ಯೋಜನೆ ತ್ವರಿತಕ್ಕೆ ಕಾರಣವಾಗಲಿದೆ. ಆದ್ದರಿಂದ ಈ ವಿಷಯದಲ್ಲಿ ಕೇಂದ್ರ-ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕೆಂದು ತಿಳಿಸಿದರು.

ಕಾಮಗಾರಿ ಆರಂಭದಿಂದ ವಿವಿ ಸಾಗರದ ವರೆಗೆ ಆಗಿರುವ ಕಾಮಗಾರಿಯನ್ನು ವೀಕ್ಷಿಸಿದ್ದು, ಸಮಾಧಾನ ತಂದಿದೆ. ಇನ್ನಷ್ಟು ವೇಗ ಪಡೆದುಕೊಂಡರೇ ನಿಗದಿತ ಅವಧಿಯೊಳಗೆ ಜಿಲ್ಲೆಯನ್ನು ಸಂಪೂರ್ಣ ಹಸಿರನ್ನಾಗಿಸಬಹುದು ಎಂದರು.

ಫೆಬ್ರವರಿ ತಿಂಗಳೊಳಗೆ ಪ್ರಾಯೋಗಿಕವಾಗಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ವಿಷಯವೇ ರೋಮಾಂಚನ. ಈ ಮೂಲಕ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನಡೆಸಿದ ಚಳವಳಿ ಸಾರ್ಥಕತೆ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಶೀಘ್ರದಲ್ಲಿ ಮಂಡಿಸುವ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ಕೊಟ್ಟ ಮಾತನ್ನು ಎರಡು ಸರ್ಕಾರ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಖ್ಯಾತ ವಕೀಲ ಪ್ರೊ.ರವಿ ವರ್ಮ ಕುಮಾರ್ ಮಾತನಾಡಿ, ನ್ಯಾಯಾಲಯದ ಮೆಟ್ಟೀಲು ಏರಿ ಹೇಮಾವತಿ ನೀರನ್ನು ಶಿರಾಕ್ಕೆ ಕೊಡಿಸಿದ್ದೇನೆ. ಅದೇ ಕಾರಣಕ್ಕೆ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಾರ್ವಜನಿಕ ಹಿತಾಸಕ್ತಿಯಡಿ ಅರ್ಜಿ ಸಲ್ಲಿಸಬಹುದೇ ಎಂಬ ಕುರಿತು ಅಧ್ಯಯನ ನಡೆಸುತ್ತಿದ್ದೇನೆ. ಆದರೆ, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೇಕಾಗಿದೆ ಎಂದರು.

ರಾಜ್ಯದ ೨೮ ಸಂಸದರು ಲೋಕಸಭೆಯಲ್ಲಿ ಯೋಜನೆ ಕುರಿತು ಧ್ವನಿಯೆತ್ತಿದರೆ ೫,೩೦೦ ಕೋಟಿ ರೂ. ಬಿಡುಗಡೆ ಖಚಿತ. ಈ ನಿಟ್ಟಿನಲ್ಲಿ ಅವರ ಮೇಲೆ ಒತ್ತಡ ತರುವ ರೀತಿ ಹೋರಾಟ ರೂಪಿಸಬೇಕು. ನನಗೆ ೭೫, ಕೋದಂಡರಾಮಯ್ಯ ಅವರಿಗೆ ೮೬. ಈ ವಯಸ್ಸಿನಲ್ಲೂ ನಾವೇ ಹೋರಾಟ ಮಾಡಬೇಕಾ? ಯುವ ಪೀಳಿಗೆ ಪ್ರಶ್ನೀಸಿಕೊಳ್ಳಬೇಕೆಂದು ತಿಳಿಸಿದರು.

ರಾಜ್ಯ ರೈತಸಂಘದ ಸೋಮಗುದ್ದು ರಂಗಸ್ವಾಮಿ, ಈಚಘಟ್ಟದ ಸಿದ್ದವೀರಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಹೊರಕೇರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮುಖಂಡರಾದ ಜಿ.ಎಸ್.ಉಜ್ಜನಪ್ಪ, ಆರ್.ಶೇಷಣ್ಣ ಕುಮಾರ್, ಡಿ.ದುರುಗೇಶ್, ಚಳ್ಳಕೆರೆ ಬಸವರಾಜ್, ನರೇನಹಳ್ಳಿ ಅರುಣ್‌ಕುಮಾರ್, ರಾಘವೇಂದ್ರ ನಾಯ್ಕ, ಕೂನಿಕೆರೆ ರಾಮಣ್ಣ, ಸಂಪತ್‌ ಕುಮಾರ್, ಟಿ.ಶಫಿಉಲ್ಲಾ, ತಿಪ್ಪೀರಯ್ಯ, ವದ್ದಿಕೆರೆ ಕಾಂತರಾಜ್ ಇತರರು.


ಪವಾಡ ಖಚಿತ:
ನಾನು ಹುಟ್ಟಿದಾಗಿನಿಂದಲೂ ಭದ್ರಾ ಮೇಲ್ದಂಡೆ ಯೋಜನೆ ಹೆಸರು ಕೇಳಿ ಇದು ಸಾಧ್ಯವೇ ಇಲ್ಲವೆಂಬ ಮನಸ್ಥಿತಿಗೆ ಬಂದಿದ್ದೇ. ಆದರೆ, ಪವಾಡ ರೀತಿ ಫೆಬ್ರವರಿ ತಿಂಗಳು ಜಿಲ್ಲೆಗೆ ಭದ್ರಾ ನೀರು ಹರಿಯಲಿದೆ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಳ್ಳಬಾರದು. ಈಗ ನೀರು ಹರಿಯಲಿದೆ
, ಜೊತೆಗೆ

ಇನ್ನಷ್ಟು ಕೆಲಸ ಆಗಬೇಕಾಗಿದೆ. ಆದ್ದರಿಂದ ಕೋದಂಡರಾಮಯ್ಯ ತಮ್ಮ ತಂಡದೊಂದಿಗೆ ಬೀದಿಗೆ ಇಳಿಯಬೇಕು. ಜನರ ಪರವಾಗಿ ಹೋರಾಟ ಮಾಡಬೇಕು. ರಾಜಕಾರಣ ಮತ್ತು ಹೋರಾಟವೇ ಬೇರೆ ಎಂಬ ಸತ್ಯ ಅರಿತುಕೊಳ್ಳಬೇಕೆಂದರು.
ಪ್ರೊ.ರವಿವರ್ಮಕುಮಾರ್, ಮಾಜಿ ಅಡ್ವಕೇಟ್ ಜನರಲ್. 

ಉರುಳಾಗದಿರಲಿ:
ರಾಜ್ಯದಲ್ಲಿ ರೈತಸಂಘ ಅನೇಕ ಜನಪರ ಹೋರಾಟ ಮಾಡಿದೆ. ಆದರೆ, ಭದ್ರಾ ಮೇಲ್ದಂಡೆ ವಿಷಯದಲ್ಲಿ ಕೆಲ ರೈತರು ಪರಿಹಾರ ಪಡೆದುಕೊಂಡು ಕಾಮಗಾರಿಗೆ ಅಡ್ಡಿಪಡಿಸುವ ಕೆಲಸ ಬೇಸರದ ಸಂಗತಿ.
ಈ ವಿಷಯಲ್ಲಿ ರೈತಮುಖಂಡರು, ಕೃಷಿಕರಿಗೆ ಬುದ್ಧಿಮಾತು ಹೇಳಬೇಕಿದೆ. ಇಲ್ಲದಿದ್ದರೆ ರೈತಸಂಘಕ್ಕೆ ಉರುಳಾಗುವ ಸಾಧ್ಯತೆ ಹೆಚ್ಚು ಆತಂಕ ವ್ಯಕ್ತಪಡಿಸಿದರು.
ಪ್ರೊ.ರವಿವರ್ಮಕುಮಾರ್. 

ರಾಜಕಾರಣಿಗಳ ಸಹಕಾರ:
ಮುರುಘಾ ಮಠ, ಡಿ.ಸುಧಾಕರ್, ಬಿ.ಟಿ.ಚನ್ನಬಸಪ್ಪ, ಜಿ.ಎಸ್.ಮಂಜುನಾಥ್, ಜಿ.ಎಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್, ಎಂ.ಚಂದ್ರಪ್ಪ ಸೇರಿ ಅನೇಕ ರಾಜಕಾರಣಿಗಳು, ಸಂಘ-ಸಂಸ್ಥೆಗಳ ಮುಖಂಡರು ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದರ ಫಲ ಯೋಜನೆ ಜಾರಿಗೊಂಡಿದೆ.
ಪಿ.ಕೋದಂಡರಾಮಯ್ಯ, ಮಾಜಿ ಸಂಸದರು.

ಡಿಕೆಶಿ ಸಾಥ್:
ಜಿಲ್ಲಾ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳು ಕೈಗೊಂಡ ಎರಡು ದಿನಗಳ ಕಾಲ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವೀಕ್ಷಣೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪೂರ್ಣ ಸಹಕಾರ ನೀಡಿದ್ದಾರೆ. ಅಧಿಕಾರಿಗಳನ್ನು ನಮ್ಮೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಅದೇ ರೀತಿ ಬರುವ ಬಜೆಟ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರು ಸೇರಿ ಯೋಜನೆಗೆ ಹೆಚ್ಚು ಹಣ ಕೊಟ್ಟರೇ ಜಿಲ್ಲೆಗೆ ಒಳ್ಳೆಯದಾಗಲಿದೆ.
ಪಿ.ಕೋದಂಡರಾಮಯ್ಯ, ಮಾಜಿ ಸಂಸದರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ