ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಫಿಲ್ಟರ್ ಹೌಸ್ ಹತ್ತಿರ ಕೋಳಿಬುರುಜನಹಟ್ಟಿಯ ನಿವಾಸಿ ಸುಚೇತ ಎಂ. ಇವರು ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾದ ಎ.ಎನ್.ನಟರಾಜಗೌಡ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳ ಅನುಮೋದನೆಯಂತೆ ಸುಚೇತ ಎಂ. ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪದವಿಧರ ವಿಭಾಗದ ಅಧ್ಯಕ್ಷ ಪ್ರಕಾಶ್‌ರಾಮನಾಯ್ಕ ತಿಳಿಸಿದ್ದಾರೆ.



