Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಂಗಾಡಿಯಪ್ಪನವರ ಬದುಕು ಇಂದಿನ ಪೀಳಿಗೆ ಅರಿಯಲಿ-ಎಂ. ಜಿ. ಶ್ರೀನಿವಾಸ್

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರದ ಅಭಿವೃದ್ದಿಗೆ
 ಲೋಕ ಸೇವಾ ನಿರತ ಡಿ. ಕೊಂಗಾಡಿಯಪ್ಪ ನವರ ಕೊಡುಗೆ ಅಪಾರವಾಗಿದ್ದು, ಅವರ ನಿಸ್ವಾರ್ಥ ಸೇವೆ, ಶ್ರಮದಿಂದಾಗಿ ಇಂದು ದೊಡ್ಡಬಳ್ಳಾಪುರ ರಾಜ್ಯದಲ್ಲಿಯೇ ಹೆಸರುವಾಸಿಯಾಗಲು ಕಾರಣವಾಗಿದೆ. ಇಂತಹ ಮಹನೀಯರ ಪುತ್ಥಳಿಯನ್ನು ನಗರಸಭೆ ಕಾರ್ಯಾಲಯದ ಮುಂಭಾಗ ಸ್ಥಾಪಿಸಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಅಧ್ಯಕ್ಷ  ಹಾಗೂ ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಹೇಳಿದರು.

ಲೋಕ ಸೇವಾ ನಿರತ ಡಿ.ಕೊಂಗಾಡಿಯಪ್ಪನವರ 165 ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆಯ ಮಾರುಕಟ್ಟೆ ಶಾಲೆಯ ಮುಂಭಾಗದಲ್ಲಿನ ಕೊಂಗಾಡಿಯಪ್ಪ ನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ  ಮಾತನಾಡಿದ ಅವರು

ನೇಕಾರಿಕೆಯಲ್ಲಿ ಪ್ರಸಿದ್ದವಾಗಿರುವ ದೊಡ್ಡಬಳ್ಳಾಪುರ ಕ್ಕೆ ಹೆಸರು ಬರಲು ಕೊಂಗಾಡಿಯಪ್ಪನವರ ಪರಿಶ್ರಮ ಕಾರಣವಾಗಿದೆ. ಇಂತಹ ಮಹನೀಯರ ನಿಂತಿರುವ ಭಂಗಿಯ ಪುತ್ಥಳಿಯನ್ನು ಸ್ಥಾಪಿಸಲು ಹಲವಾರು ಒತ್ತಾಯಗಳನ್ನು ಮಾಡಲಾಗಿದೆ. ಆದರೆ ಫಲಪ್ರದವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಕೊಂಗಾಡಿಯಪ್ಪನವರ ಪರಿಶ್ರಮದಿಂದಾಗಿ ನಮ್ಮ ಊರಿನಲ್ಲಿ ಅಂದಿನ ಕಾಲದಲ್ಲಿಯೇ ವಿದ್ಯುತ್, ಕೊಳವೆ ಬಾವಿಪ್ರೌಢಶಾಲೆ, ಆಸ್ಪತ್ರೆಪಶು ವೈದ್ಯಶಾಲೆ, ಕೈಮಗ್ಗ ಮತ್ತು  ಗೃಹ ಕೈಗಾರಿಕಾ ತರಬೇತಿ ಕೇಂದ್ರಗಳು ಸ್ಥಾಪನೆಯಾಗಿದ್ದವು.

  ಅಕಾರಿಗಳ ಬಳಿಗೆ ತೆರಳಿ ಊರಿಗೆ ಆಗಬೇಕಾದ ಕೆಲಸಗಳನ್ನು ನಿವೇದನೆ ಮಾಡಿ ಆಗುವವರೆಗೂ ಬೆಂಬಿಡದೇ ಮಾಡಿಸುತ್ತಿದ್ದರು. ಕೊಂಗಾಡಿಯಪ್ಪನವರು ಊರಿನ ಯಾವ ಸಮಸ್ಯೆಯನ್ನಾಗಲೀ ಬಗೆಹರಿಸಲು ದುಡಿಯುತ್ತಿದ್ದರು. ಶಿಕ್ಷಣ, ಪರಿಸರ, ಸಮಾಜ ಸೇವೆಗಳಿಗೆ ಒತ್ತು ನೀಡಿದ್ದ ಅವರ ಬದುಕು ಹಾಗೂ ಜೀವನ ಕ್ರಮ ಇಂದಿನ ಪೀಳಿಗೆಗೆ ತಿಳಿಯಬೇಕು ಎಂದರು.

ಈ ಸಂದರ್ಭದಲ್ಲಿ ದೇವಾಂಗ ಮಂಡಲಿ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಪಿ.ಗೋಪಾಲ್, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ನಗರಸಭೆ ಸದಸ್ಯರು, ದೇವಾಂಗ ಮಂಡಲಿ ನಿರ್ದೇಶಕರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ