Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿದರು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಇನ್ನು ಬಲವಾಗಬೇಕು. ಅಶಿಸ್ತಿಗೆ ಇಲ್ಲಿ ಜಾಗವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಮುರುಳಿಧರ ಹಾಲಪ್ಪ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಎಚ್ಚರಿಕೆ ನೀಡಿದರು.

ಜೂ.೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Advertisement

ಪೂರ್ವಭಾವಿ ಸಭೆಗೆ ಬಾರದಿದ್ದವರಲ್ಲಿ ಜವಾಬ್ದಾರಿಯಿಲ್ಲ ಎಂದರ್ಥವಾಗುತ್ತದೆ. ಸಹಸ್ರಾರು ಮಂದಿ ಪಕ್ಷದಲ್ಲಿ ಜವಾಬ್ದಾರಿ ಹೊರಲು ಸಿದ್ದರಿದ್ದಾರೆ. ಇಪ್ಪತ್ತು ದಿನಗಳ ಹಿಂದೆ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಗೆ ಗೈರಾದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದು ಹಾಕಲಾಯಿತು. ಮುಂಬರುವ ಎಲ್ಲಾ ಚುನಾವಣೆಯಲ್ಲೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಸಿದ್ದರಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ. ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ಗೆ ಭರವಸೆ ನೀಡಬೇಕಿದೆ ಎಂದರು.

 

ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಮುಂದಾಗಿರುವುದನ್ನು ಕಾರ್ಯಕರ್ತರು ಲಘುವಾಗಿ ತೆಗೆದುಕೊಳ್ಳಬಾರದು. ಅರ್ಹ ಮತದಾರರು ಮತ ಪಟ್ಟಿಯಿಂದ ಹೊರ ಹೋಗದಂತೆ ಎಚ್ಚರ ವಹಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ನಿಮ್ಮ ನಿಮ್ಮ ಬ್ಲಾಕ್, ಬೂತ್ ಮಟ್ಟಗಳಲ್ಲಿ ಗಟ್ಟಿಯಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಸಂಘಟನಾ ಚತುರ ಅನೇಕ ರಾಜ್ಯಗಳ ಉಸ್ತುವಾರಿಯಾಗಿದ್ದ ಬಿ.ಕೆ.ಹರಿಪ್ರಸಾದ್‌ರವರನ್ನು ಹೈಕಮಾಂಡ್ ಕೆಪಿಸಿಸಿ. ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಜೂ.೨೧ ರಂದು ಅವರ ಪದಗ್ರಹಣ ಸಮಾರಂಭದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಪಾಲ್ಗೊಳ್ಳಬೇಕು. ಪಕ್ಷಕ್ಕೆ ದುಡಿದ ಎಲ್ಲರಿಗೂ ಸ್ಥಾನಮಾನಗಳು ಸಿಗುತ್ತದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಬೇಕು. ಪಂಚ ಗ್ಯಾರೆಂಟಿಯಿಂದ ರಾಜ್ಯ ಹಸಿವು ಬಡತನ ಮುಕ್ತವಾಗಿದೆ. ಎಸ್‌ಐಆರ್. ನಿಂದ ಒಬ್ಬ ಮತದಾರನು ಪಟ್ಟಿಯಿಂದ ಹೊರಗುಳಿಯಬಾರದು. ನೈಜ ಮತದಾರರ ಹಕ್ಕು ಕಾಪಾಡಬೇಕಿದೆ ಎಂದರು.

ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ದಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ ಎಸ್‌ಐಆರ್. ಬಗ್ಗೆ ಮೊದಲು ಜಿಲ್ಲೆಯ ಎಲ್ಲಾ ಶಾಸಕರು ತಿಳಿದುಕೊಂಡು ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಬೇಕು. ಬಿಜೆಪಿ. ಆರ್.ಎಸ್.ಎಸ್.ನವರು ಕಾಂಗ್ರೆಸ್ ಶಾಸಕರುಗಳನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಮೂಲಕ ಕಾಂಗ್ರೆಸ್ ಮತಗಳನ್ನು ಪಟ್ಟಿಯಿಂದ ಡಿಲಿಟ್ ಮಾಡಲು ಹೊರಟಿದ್ದಾರೆ. ಈಗಾಗಲೆ ಪಶ್ಚಿಮ ಬಂಗಾಳ, ಬಿಹಾರದಲ್ಲಿ ಲಕ್ಷಾಂತರ ಮತಗಳು ಪಟ್ಟಿಯಿಂದ ಹೊರತೆಗೆಯಲಾಗಿದೆ. ಎಸ್‌ಐಆರ್.ನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲೆಯ ಎಲ್ಲಾ ಶಾಸಕರುಗಳು ಜವಾಬ್ದಾರಿ ವಹಿಸಿಕೊಂಡರೆ ಬಿ.ಕೆ.ಹರಿಪ್ರಸಾದ್‌ರವರ ಪದಗ್ರಹಣಕ್ಕೆ ಜಿಲ್ಲೆಯಿಂದ ಲಕ್ಷಾಂತರ ಕಾರ್ಯಕರ್ತರು ಬೇಕಾದರೂ ಭಾಗವಹಿಸುತ್ತಾರೆ. ಕೇಂದ್ರ ಚುನಾವಣಾ ಆಯೋಗದ ಮೂಲಕ ಎಸ್‌ಐಆರ್.ಗೆ ಬಿಜೆಪಿ. ಆರ್.ಎಸ್.ಎಸ್. ಕೈಹಾಕಿದೆ. ಇದರ ವಿರುದ್ದ ಪ್ರತಿಯೊಬ್ಬರು ಜಾಗೃತರಾಗಿರಬೇಕೆಂದು ಮನವಿ ಮಾಡಿದರು.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ ಜೂ.೨೧ ರಂದು ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಬಿ.ಕೆ.ಹರಿಪ್ರಸಾದ್‌ರವರಿಗೆ ವಿರೋಧಿಗಳ ಟೀಕೆಗೆ ಉತ್ತರ ಕೊಡುವ ಧೈರ್ಯವಿದೆ. ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದರೆ ಒಂದೊಂದು ಕ್ಷೇತ್ರದಿಂದ ಎರಡು ಸಾವಿರ ಮಂದಿಯಾದರೂ ಪಾಲ್ಗೊಳ್ಳಬಹುದು. ಅದಕ್ಕೆ ಬೇಕಾದ ವಾಹನಗಳ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ ಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಕೆ.ಹರಿಪ್ರಸಾದ್‌ರವರ ಪದಗ್ರಹಣ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಬೇಕು. ಕಾರ್ಯಕರ್ತರಲ್ಲಿ ಹುರುಪು ಮೂಡಿದೆ. ಐವತ್ತು ವರ್ಷಗಳಿಂದಲೂ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿರುವ ಡಿ.ಕೆ.ಶಿವಕುಮಾರ್‌ರವರ ಹೋರಾಟವನ್ನು ಗುರುತಿಸಿ ಪಕ್ಷದ ವರಿಷ್ಟರು ಮುಖ್ಯಮಂತ್ರಿಯನ್ನಾಗಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಕೈಬಿಡಲ್ಲ ಎಂದರು.

ಕುಶಲ ಕರ್ಮಿ ವಿಭಾಗದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಇವರುಗಳು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಮಾಜಿ ಎಂಎಲ್‌ಸಿ ಜಯಮ್ಮ ಬಾಲರಾಜ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಕಾನೂನು ವಿಭಾಗದ ಅಧ್ಯಕ್ಷ, ಡಿ.ಸುದರ್ಶನ್, ಜಿಲ್ಲಾ ಉಸ್ತುವಾರಿ ಸಚಿವ ದಿ. ಡಿ.ಸುಧಾಕರ್‌ರವರ ಪುತ್ರ ಸುಹಾಸ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.

ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು