Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಕ್ರಮಗಳ ಹೊಣೆ ಹೊತ್ತು ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಜೆಡಿಎಸ್ ರಾಜ್ಯ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುರಾಜ್ಯ ಸರ್ಕಾರದ ಸರಣಿ ಅಕ್ರಮಗಳು ಹಾಗೂ ಕೆಪಿಎಸ್‌ಸಿ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

Advertisement

ಐಎಎಸ್ ಅಧಿಕಾರಿ ಬಂಧನ ಹಾಗೂ 'ರೆಸಾರ್ಟ್ರಾಜಕೀಯ:
ಕೆಪಿಎಸ್‌ಸಿ ಅಕ್ರಮದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, "ಅಧಿಕಾರಿಯನ್ನು ದೆಹಲಿಗೆ ಕಳುಹಿಸಿದ್ದು ಯಾರುದೆಹಲಿಯಲ್ಲಿ ಅನಾಹುತವಾದ ಬಳಿಕ ಬೇರೆ ರಾಜ್ಯಕ್ಕೆ ಕರೆದೊಯ್ದುಇಡಿ ದಾಳಿ ನಡೆಸುತ್ತಿದ್ದಂತೆ ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಮೂರು ದಿನ ಕೂರಿಸಿದ್ದು ಯಾರು?" ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ನೇರವಾಗಿ ಪ್ರಶ್ನಿಸಿದರು.

ಅಷ್ಟೇ ಅಲ್ಲದೆ, 40-50 ಅಭ್ಯರ್ಥಿಗಳನ್ನು ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಇಬ್ಬರು ಹೆಣ್ಣುಮಕ್ಕಳನ್ನು ರೆಸಾರ್ಟ್‌ನಲ್ಲಿ ಕೂರಿಸಿ ಕೆಎಎಸ್ ಹಾಗೂ ಇತರ ಪರೀಕ್ಷೆಗಳನ್ನು ಬರೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ನೇಮಕಾತಿ ಆದೇಶ ವಿತರಣೆಯಲ್ಲಿ ಅಕ್ರಮ:
ಆರ್‌ಡಿಪಿಆರ್‌ಸಹಾಯಕ ಕಾರ್ಯಕಾರಿ ಎಂಜಿನಿಯರ್ ನೇಮಕಾತಿಯಲ್ಲಿ ಲೋಪದೋಷಗಳಾಗಿವೆಒಎಂಆರ್ ಶೀಟ್ ತಿದ್ದಲಾಗಿದೆ ಮತ್ತು ಸಿಸಿಟಿವಿ ಫೂಟೇಜ್ ಇಲ್ಲ ಎಂದು ಕೆಪಿಎಸ್‌ಸಿ ಉಪ ಸಮಿತಿ ಹೇಳಿದ್ದರೂ ಹಾಗೂ ಹೊಸ కార్యದರ್ಶಿ ಪತ್ರ ಬರೆದಿದ್ದರೂ ಸರ್ಕಾರ 24 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದೆ. ಹೈಕೋರ್ಟ್‌ನಲ್ಲಿ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇತ್ತೀಚೆಗೆ ಹೈಕೋರ್ಟ್ ನೀರಾವರಿ ಇಲಾಖೆಯ ಜೆಇ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿರುವುದನ್ನು ಉಲ್ಲೇಖಿಸಿದ ಅವರು, "ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದುಹೈಕೋರ್ಟ್ ಸರ್ಕಾರದ ಮುಖಕ್ಕೆ ಮತ್ತೊಮ್ಮೆ ಮಂಗಳಾರತಿ ಮಾಡಿದೆ" ಎಂದರು.

ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ:
ಪ್ರಿಯಾಂಕ್ ಖರ್ಗೆಗೆ ಸವಾಲು: "1998ರಲ್ಲಿ ಅಥವಾ 2006-07ರಲ್ಲಿ ನನ್ನ ಅವಧಿಯಲ್ಲಿ ಕೆಪಿಎಸ್‌ಸಿಗೆ ದಲಿತ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೆ. ನನ್ನ ಸಂಬಂಧಿಕರನ್ನಲ್ಲ. ಅರ್ಕಾವತಿ ಬಡಾವಣೆ ಸರ್ವನಾಶ ಮಾಡಿ ಕಲೆಕ್ಷನ್ ಮಾಡುತ್ತಿದ್ದವರನ್ನು ನೀವು ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಹುದ್ದೆಗಳನ್ನು ಬೀದಿ ಬೀದಿಯಲ್ಲಿ ಹರಾಜು ಹಾಕುತ್ತಿದ್ದೀರಿ" ಎಂದು ಕಿಡಿಕಾರಿದರು.

ರಾಹುಲ್ ಗಾಂಧಿಗೆ ಸವಾಲು: "ದೇಶದೆಲ್ಲೆಡೆ ಸಂವಾದ ನಡೆಸುವ ನಿಮ್ಮ ರಾಷ್ಟ್ರೀಯ ನಾಯಕರನ್ನು (ರಾಹುಲ್ ಗಾಂಧಿ) ಕರ್ನಾಟಕಕ್ಕೆ ಕರೆಸಿಇಲ್ಲಿನ ಯುವಕರ ಜೊತೆ ಸಂವಾದ ಮಾಡಿಸಿ. ಕಳೆದ ಮೂರು ವರ್ಷಗಳಲ್ಲಿ ಎಷ್ಟು ಹುದ್ದೆ ನೀಡಿದ್ದೀರಿ ಎಂದು ಉತ್ತರಿಸಿ" ಎಂದು ಸವಾಲೆಸೆದರು.

ಬಿ. ನಾಗೇಂದ್ರ ವಿಚಾರ: ಬಿ. ನಾಗೇಂದ್ರ ಅವರನ್ನು ಕಾಂಗ್ರೆಸ್ ಸರ್ಕಾರವೇ ಬಲಿ ಪಡೆದಿದೆ. ಅವರ ಕಣ್ಣೀರಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಹೇಳಿದರು.

"ಅಮೆರಿಕದಿಂದ ಬಂದ ಬಳಿಕ ದೇಶವೇ ಅಲ್ಲೋಲಕಲ್ಲೋಲವಾಗುವ ವಿಚಾರ ಬಹಿರಂಗ"ತಮ್ಮ 10 ದಿನಗಳ ಅಮೆರಿಕ ಪ್ರವಾಸದ ನಂತರ ರಾಜ್ಯದ ಆಡಳಿತಕ್ಕೆ ಸಂಬಂಧಿಸಿದಂತೆ 'ದೇಶವೇ ಅಲ್ಲೋಲಕಲ್ಲೋಲ ಆಗುವಂತಹಬೃಹತ್ ವಿಷಯವೊಂದನ್ನು ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಬಹಿರಂಗಪಡಿಸುವುದಾಗಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. "ಈ ರಾಜ್ಯವನ್ನು ಕಾಂಗ್ರೆಸ್ ನಾಯಕರು ಎಲ್ಲಿಗೆ ತಂದಿಟ್ಟಿದ್ದಾರೆ ಎಂಬುದನ್ನು ಧೈರ್ಯವಾಗಿ ಮಾಧ್ಯಮಗಳ ಮುಂದೆ ಇಡುತ್ತೇನೆ" ಎಂದು ತಿಳಿಸಿದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌