ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಅಂತಿಮ ಬಿ. ಎ. ಪರೀಕ್ಷೆಯಲ್ಲಿ ಲಾವಣ್ಯ ಪದವಿ ಕಾಲೇಜಿನ ವಿದ್ಯಾರ್ಥಿ ಕೃತಿಕ್ ಓ.ಐದನೇ ರ್‍ಯಾಂಕ್ ಪಡೆದು ಚಿನ್ನದ ಪದಕ ಪಡೆದಿದ್ದಾರೆ.
ಚಿನ್ನದ ಪದಕ ಪಡೆದ ವಿದ್ಯಾರ್ಥಿ ಕೃತಿಕ್ ಸಾಧನೆಗೆ ಲಾವಣ್ಯ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ, ಪ್ರಾಮ್ಶುಪಾಲ ಎಂ. ಸಿ. ಮಂಜುನಾಥ್ ಹಾಗೂ ಕಾಲೇಜಿನ ಬೋಧಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.



