Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ಎದ್ದೇಳು ಕನ್ನಡಿಗ ಕೆಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ  ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಚಾಲನೆ ನೀಡಿ ಮದಕರಿ ಸರ್ಕಲ್
, ಅಂಬೇಡ್ಕರ್ ವೃತ್ತ,ಮಹಾತ್ಮ ಗಾಂಧೀ ವೃತ್ತ,ಗಾಯಿತ್ರಿ ಭವನ ಮೂಲಕ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

ಕೆಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಸೋಮಸುಂದರ ಮಾತನಾಡಿ  ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ.

ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೆಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ ಮಾತನಾಡಿ ರಾಜ್ಯದಲ್ಲಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ, ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನುನಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.


ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ್, ಮಹೇಶ್ ನಗರಂಗೆರೆ, ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ, ಶಿವರಾಜ್ ಕಪಗಲ್, ಜಿಲ್ಲಾ ಮುಖಂಡರಾದ ನಾಗರೆಡ್ಡಿ, ಬಾಲರಾಜು, ಪುಟ್ಟಮ್ಮ, ಅಂಜನಪ್ಪ, ಜಬೀಮುಲ್ಲಾ, ಕೆಂಚಪ್ಪ, ಮಂಜಪ್ಪ, ಕೆಂಚಪ್ಪ ನಾಯಕ, ಕೃಷ್ಣಪ್ಪ, ರಮೇಶ್ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ, ಉಪಾಧ್ಯಕ್ಷೆ ಮಮತಾ, ಪ್ರಧಾನ ಕಾರ್ಯದರ್ಶಿ ರೇಖಾ, ಕಾರ್ಯದರ್ಶಿಗಳಾದ ಮಂಜುಳ, ಲಕ್ಷ್ಮೀಮ್ಮ, ಸುನೀತಾ, ಮಂಜುಳ, ರತ್ನಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ