Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಚಿತ್ರದುರ್ಗದಲ್ಲಿ ಕೆಎಸ್ ಸಿಎ ಕ್ರಿಕೆಟ್ ಆಟಗಾರರ ಆಯ್ಕೆ ಪ್ರಕ್ರಿಯೆ ಮತ್ತು ತರಬೇತಿ ಶಿಬಿರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ತುಮಕೂರು ವಲಯದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ವೃತ್ತಿಪರ ತರಬೇತಿ ನೀಡುವ ಉದ್ದೇಶದಿಂದ ವಿವಿಧ ವಯೋಮಿತಿಯ ಕ್ರಿಕೆಟ್ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. 

​ಜಿಲ್ಲೆಯ ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಜಿಲ್ಲೆ, ವಲಯ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ವೇದಿಕೆ ಕಲ್ಪಿಸಿಕೊಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಆಯ್ಕೆಯಾದ ಆಟಗಾರರಿಗೆ ಹಿರಿಯ ಆಟಗಾರರು ಹಾಗೂ ರಾಜ್ಯ ಅಕಾಡಮಿ ತರಬೇತುದಾರರಿಂದ ವಿಶೇಷ ತರಬೇತಿ ನೀಡಲಾಗುವುದು. 

​ಆಯ್ಕೆ ಪ್ರಕ್ರಿಯೆಯ ವಿವರಗಳು:
​ಸ್ಥಳ: ಚಿತ್ರದುರ್ಗ ಅಕಾಡಮಿ ಟರ್ಫ್ ಗೌಂಡ್, ಬೆಳಘಟ್ಟ. ​ಸಮಯ: ಬೆಳಿಗ್ಗೆ 9:00 ಗಂಟೆಗೆ. 

​ಅಗತ್ಯ ದಾಖಲೆಗಳು: ಆಸಕ್ತ ಆಟಗಾರರು ಕ್ರಿಕೆಟ್ ಸಮವಸ್ತ್ರ, ಕಿಟ್ ಸಲಕರಣೆಗಳು, ಆಧಾರ್ ಕಾರ್ಡ್ ಮತ್ತು ವಯಸ್ಸಿನ ದೃಢೀಕರಣ ಪತ್ರದೊಂದಿಗೆ ಹಾಜರಿರಬೇಕು. 

​ವೇಳಾಪಟ್ಟಿ:ವಯೋಮಿತಿ ದಿನಾಂಕ
14
ವರ್ಷದೊಳಗಿನವರ ತಂಡ 01-04-2026
16
ವರ್ಷದೊಳಗಿನವರ ತಂಡ 07-04-2026
19
ವರ್ಷದೊಳಗಿನವರ ತಂಡ 08-04-2026

ವಿಶೇಷ ಸೂಚನೆಗಳು:
​ಮಹಿಳಾ ಮತ್ತು ಬಾಲಕಿಯರಿಗೂ ಸಹ ಚಿತ್ರದುರ್ಗ ಜಿಲ್ಲಾ ತಂಡಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದವರು ದಾವಣಗೆರೆ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳ ವಿರುದ್ಧ ನಡೆಯುವ ಅಂತರ್ ಜಿಲ್ಲಾ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. 

​ಅಂತರ್ ಜಿಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ 30 ದಿನಗಳ ವಿಶೇಷ ತರಬೇತಿ ಶಿಬಿರಕ್ಕೆ ಆಯ್ಕೆ ಮಾಡಲಾಗುವುದು. 

​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಕ್ರಿಕೆಟ್ ಕ್ಲಬ್ ಆಟಗಾರರು ಹಾಗೂ ಆಸಕ್ತರು ಈ ಸದವಕಾಶವನ್ನು ಬಳಸಿಕೊಂಡು ಉತ್ತಮ ಆಟಗಾರರಾಗಿ ರೂಪುಗೊಳ್ಳಬೇಕೆಂದು ಜಿಲ್ಲಾ ಸಂಚಾಲಕರಾದ ಎನ್. ಅಶೋಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9741738564, 6360411015.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ