Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‍ಆರ್‍ಟಿಸಿ ನೌಕರರ ಮುಷ್ಕರ: ಪರ್ಯಾಯ ಸಾರಿಗೆ ವ್ಯವಸ್ಥೆ- ಜಿಲ್ಲಾಧಿಕಾರಿ ಟಿ.ವೆಂಕಟೇಶ್

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ಸಿಬ್ಬಂದಿ ಟ್ರೇಡ್ ಯೂನಿಯನ್‍ಗಳ ಜಂಟಿ ಕ್ರಿಯಾ ಸಮಿತಿ ಬುಧವಾರದಿಂದ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ
, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರಿಗೆ ನೌಕರರು ಆರು ಬೇಡಿಕೆಗಳ ಕುರಿತು ಮೇ 20 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿದ್ದು, ಮುಷ್ಕರದ ಅವಧಿಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ  ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 308 ಖಾಸಗಿ ಬಸ್‍ಗಳ ಪರ್ಮಿಟ್‍ಗಳಿದ್ದು, ಈ ಪೈಕಿ 22 ಬಸ್‍ಗಳು ಸರೆಂಡರ್ ಆಗಿವೆ. ಸದ್ಯ ಚಾಲ್ತಿಯಲ್ಲಿರುವ 280 ಖಾಸಗಿ ಬಸ್‍ಗಳನ್ನು ಕೆಎಸ್‍ಆರ್‍ಟಿಸಿ ಬಸ್‍ಗಳ ನಿಗದಿತ ವೇಳಾಪಟ್ಟಿಗೆ ಧಕ್ಕೆಯಾಗದಂತೆ ಸಾರ್ವಜನಿಕರ ಸೇವೆಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದರು. ಖಾಸಗಿ ಬಸ್ ಮಾಲೀಕರು ಸಹ ಮುಷ್ಕರದ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಒಪ್ಪಿಗೆ ನೀಡಿದರು.

ಒಂದು ವೇಳೆ ಮುಷ್ಕರವು ಸುದೀರ್ಘವಾಗಿ ಮುಂದುವರಿದರೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳ ಬಸ್‍ಗಳನ್ನು ಸಾರಿಗೆ ಉದ್ದೇಶಕ್ಕೆ ಬಳಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ಕೆಎಸ್‍ಆರ್‍ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಪೆಡರೇಷನ್ ಗೌರವ ಅಧ್ಯಕ್ಷ ರಹೀಂಸಾಬ್ ಮಾತನಾಡಿ, ಸರ್ಕಾರದಿಂದ ನೌಕರರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಿದರೆ ನಾವು ಮುಷ್ಕರವನ್ನು ವಾಪಸ್ ಪಡೆಯಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಮುಷ್ಕರದ ಅವಧಿಯಲ್ಲಿ ಯಾವುದೇ ಅಡಚಣೆಯಾಗದಂತೆ ಸೂಕ್ತ ವ್ಯವಸ್ಥೆ ಮತ್ತು ಸಾರಿಗೆ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ. ಕಾಳಿಸಿಂಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಲಿಂಗಾರೆಡ್ಡಿ, ಕೆಎಸ್‍ಆರ್‍ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಪೆಡರೇಷನ್ ಅಧ್ಯಕ್ಷ ಡಿ.ಆರ್.ಉಮೇಶ್, ಉಪಾಧ್ಯಕ್ಷ ಕಾಂತರಾಜ್, ಕಾರ್ಯದರ್ಶಿಗಳಾದ ಟಿ.ಅಶೋಕ, ಅಜ್ಜಪ್ಪ, ಖಜಾಂಚಿ ಮೂರ್ತಿನಾಯಕ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಸೇರಿದಂತೆ ಮತ್ತಿತರರು ಇದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನುಬಾಹಿರವಾಗಿ ಕಾರ್ಯದರ್ಶಿ ಮುಂದುವರಿಕೆ: ಹಿರಿಯೂರು TAPCMS ಆಡಳಿತ ಮಂಡಳಿಗೆ ಉಪ ನಿಬಂಧಕರ ಅಂತಿಮ ಎಚ್ಚರಿಕೆಹಿರಿಯೂರು ಉಪಚುನಾವಣೆ: “ಸ್ಥಳೀಯ ಸ್ವಾಭಿಮಾನ”ದ ಕೂಗು ಈಗ ಯಾಕೆ..?ಹಿರಿಯ ಪತ್ರಕರ್ತೆ ವಾಳ್ವೆಕರ್ ಚಿಕಿತ್ಸೆಗೆ 90 ಸಾವಿರ ಬಿಡುಗಡೆ ಮಾಡಿದ‌ ಸಿಎಂರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ತಮಿಳುನಾಡಿನಲ್ಲಿ ಬಿಜೆಪಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿದೆ– ಆರ್. ಅಶೋಕ್ ವಿಶ್ವಾಸರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆಇಂಡೋ-ಡಚ್ ಅತ್ಯಾಧುನಿಕ ಹೈನುಗಾರಿಕೆ ತರಬೇತಿ ಕೇಂದ್ರ ಸ್ಥಾಪನೆ ​ ಜೆಡಿಎಸ್ ಪಕ್ಷದ ಹೋರಾಟಗಳು ಜನಪರವಾಗಿ ಇರುತ್ತವೆ-ನಿಖಿಲ್ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​ರೈತರನ್ನು ಒಕ್ಕಲೆಬ್ಬಿಸಬೇಡಿ: ಡಿ.ಕೆ.ಶಿ ಪಟಾಲಂ ವಿರುದ್ಧ ನಿಖಿಲ್ ಆಕ್ರೋಶ