Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್​ಎಂಟಿ ಕಾರ್ಖಾನೆ ಪುನಚ್ಛೇತನ ಮಾಡಲು ಯತ್ನ-ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಹಿಂದೂಸ್ತಾನ್ ಮಶೀನ್ ಆ್ಯಂಡ್ ಟೂಲ್ಸ್ (ಹೆಚ್​ಎಂಟಿ) ಕಾರ್ಖಾನೆಯ ಹಾಲಿ ಹಾಗೂ ನಿವೃತ್ತ ಉದ್ಯೋಗಿಗಳು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.


ಬೆಂಗಳೂರಿನ ಹೆಚ್​ಎಂಟಿ ಕಚೇರಿಯಲ್ಲಿ ಸೋಮವಾರ ಸಚಿವರನ್ನು ಭೇಟಿಯಾದ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದರು.
ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ನಾವು ಕೇಂದ್ರ ಬೃಹತ್ ಕೈಗಾರಿಕೆ ಸಚಿವರೊಬ್ಬರನ್ನು ಭೇಟಿಯಾಗುತ್ತಿದ್ದು
, ಅದಕ್ಕೆ ಅವಕಾಶ ಕೊಟ್ಟ ನಿಮಗೆ ಧನ್ಯವಾದಗಳು ಎಂದು ನೌಕರರು, ಸಿಬ್ಬಂದಿಗಳು ಭಾವುಕರಾದರು.

ಸಚಿವರ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ನಿವೃತ್ತ ಉದ್ಯೋಗಿಗಳು, ನಾವು ನಿವೃತ್ತರಾಗಿ ಹಲವಾರು ವರ್ಷಗಳೇ ಕಳೆದಿದ್ದರೂ ನಮಗೆ ದೊರೆಯಬೇಕಾದ ಸೌಲಭ್ಯಗಳು ಇನ್ನೂ ಬಂದಿಲ್ಲ. ಕೆಲವರು ಕಾನೂನು ಹೋರಾಟ ನಡೆಸುತ್ತಿದ್ದು, ಇನ್ನೂ ಅನೇಕ ಉದ್ಯೋಗಿಗಳಿಗೆ ಅದು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ತಾವು ತುರ್ತಾಗಿ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ನಿವೃತ್ತಿ ನಂತರ ಕಂಪನಿಯಿಂದ ಬರಬೇಕಾದ ನಮ್ಮ ಸೌಲಭ್ಯಗಳು ಬಾರದೆ ಇರುವುದರಿಂದ ನಮಗೆ ಕಾಯಿಲೆ ಬಂದಾಗ ಔಷಧ ಖರೀದಿ ಮಾಡುವುದು ಕೂಡ ಕಷ್ಟವಾಗಿದೆ. ಸುಮಾರು ಐದಾರು ವರ್ಷಗಳಿಂದ ನಮಗೆ ಬರಬೇಕಿರುವ 30 ರಿಂದ 40 ಲಕ್ಷ ರೂಪಾಯಿ ಹಣ ಕಂಪನಿಯಲ್ಲಿಯೇ ಉಳಿದಿದೆ. ಈ ಹಣವನ್ನು ತಾವು ಕೊಡಿಸಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ದೇಶದ ಪ್ರತಿಷ್ಠೆಯ ಕಂಪನಿಯಾಗಿದ್ದ ಹೆಚ್​ಎಂಟಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಒಂದು ವೇಳೆ ಅಂತಹ ಸಂದರ್ಭ ಬಂದರೆ ಬಿಹೆಚ್​ಇಎಲ್, ಬಿಇಎಲ್, ಬಿಇಎಂಎಲ್ ನಂತಹ ಕಂಪನಿಗಳಲ್ಲಿ ಹೆಚ್​ಎಂಟಿಯನ್ನು ವಿಲೀನ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಕಾಲಮಿತಿಯೊಳಗೆ ತಮ್ಮ ಕಷ್ಟಗಳಿಗೆ ಸ್ಪಂದಿಸಬೇಕು
, ಇಲ್ಲವಾದರೆ ನಮಗೆ ಬದುಕೇ ಕಷ್ಟವಾಗಿದೆ ಎಂದು ನೌಕರರು ಕುಮಾರಸ್ವಾಮಿ ಬಳಿ ತಮ್ಮ ಅಳಲು ತೋಡಿಕೊಂಡರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಮಾಧಾನದಿಂದ ಉದ್ಯೋಗಿಗಳ ಮನವಿ ಆಲಿಸಿ ನಂತರ ಮಾತನಾಡಿದ ಅವರು, ನನ್ನ ಗಮನಕ್ಕೆ ಈಗಾಗಲೇ ಈ ವಿಷಯ ಬಂದಿದೆ. ಬಾಕಿ ಇರುವ 361 ಕೋಟಿಯನ್ನು ಉದ್ಯೋಗಿಗಳಿಗೆ ಪಾವತಿಸುವ ಬಗ್ಗೆ ಮಾರ್ಗೋಪಾಯ ಹುಡುಕಲಾಗುವುದು. ಈ ಬಗ್ಗೆ ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆ ಖಂಡಿತ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಹೆಚ್​ಎಂಟಿ ಕಾರ್ಖಾನೆಯನ್ನು ಪುನಚ್ಛೇತನ ಮಾಡುವುದು ಒಂದು ಭಾಗವಾದರೆ, ನಿವೃತ್ತ ಹಾಗೂ ಹಾಲಿ ಕಾರ್ಮಿಕರ ಬಾಕಿ ಪಾವತಿ ಮಾಡುವುದು ಮತ್ತೊಂದು ಸವಾಲಾಗಿದೆ. ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳಿಗೆ ಕಾಯಕಲ್ಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಏಕೆಂದರೆ, ಪ್ರಧಾನಿಗಳ ವಿಕಸಿತ ಭಾರತ ಕನಸು ಬಹುದೊಡ್ಡದು. ಆ ಗುರಿ ಮುಟ್ಟಲು ನಾವು ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಪ್ರಧಾನಿಗಳ ನೇತೃತ್ವದಲ್ಲಿ ಸಂಕಷ್ಟದಲ್ಲಿರುವ ವಿವಿಧ ಕೈಗಾರಿಕೆಗಳಿಗೆ ಮರುಜೀವ ಕೊಡುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ವೈಜಾಗ್ ಸ್ಟೀಲ್, ಭದ್ರಾವತಿಯ ಸರ್.ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಾರ್ಖಾನೆ, ಸೇಲಂ ಸ್ಟೀಲ್ ಇತ್ಯಾದಿ ಸೇರಿವೆ ಎಂದು ಕುಮಾರಸ್ವಾಮಿ ತಿಳಿಸಿ ಧೈರ್ಯ ತುಂಬಿದರು.

ದೇಶದ ಉದ್ದಗಲಕ್ಕೂ ವಿವಿಧ ಘಟಕಗಳಲ್ಲಿ ನಿವೃತ್ತರಾಗಿರುವ ಹಾಗೂ ಹಾಲಿ ಕೆಲಸ ಮಾಡುತ್ತಿರುವ ಅನೇಕರು ನೌಕರರು, ಕಾರ್ಮಿಕರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ