Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿಯೋ..,ದ್ವೇಷಗಣತಿಯೋ..? ತೀಕ್ಷ್ಣವಾಗಿ ಪ್ರಶ್ನಿಸಿದ ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿಗಣತಿಯೋ..
,ದ್ವೇಷಗಣತಿಯೋ..? ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?) ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ!! ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, 'ಒಂದ್‌ಸಲ ನಂಗೂ ಪೆನ್ನೂ-ಪೇಪರ್‌ಕೊಡಿ' ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಶ್ರೀ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ!! ಶಿವ.. ಶಿವಾ..

'ನಾನ್‌ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್‌ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಹೆಸರೇಳದೆ ವಾಗ್ದಾಳಿ ಮಾಡಿದ್ದಾರೆ.

ಪೆನ್ನೂ ಪೇಪರ್‌ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ!! ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ