Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಫೆ.6 ರಿಂದ ಕುಂದೂರು ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ ಲೋಕಾರ್ಪಣೆ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಕುಂದೂರು ಗೊಲ್ಲರಹಟ್ಟಿ (ಶ್ರೀನಿವಾಸಪುರ) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಕಳಶಾರೋಹಣ ಕಾರ್ಯಕ್ರಮವು ಫೆಬ್ರವರಿ 6 ರಿಂದ 10 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.


ಫೆ.6ರಂದು ಶುಕ್ರವಾರ ಜಾಂಡೇವು ಹೊಡೆಯುವುದು, ಮೀಸಲು ಅಕ್ಕಿ ಅಳೆಯುವುದು, ಗಂಗಾಸ್ನಾನಕ್ಕೆ ಹೊರಡುವುದು. ಫೆ.7ರಂದು ಮುಂಜಾನೆಯಿಂದಲೇ ಗಂಗಾಸ್ನಾನ ಮತ್ತು ವಿವಿಧ ದೇವತೆಗಳ ಪೂರ್ಣಕುಂಭ ಸ್ವಾಗತದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಸಂಜೆ ವಾಸ್ತುಹೋಮ ಹಾಗೂ ರಕ್ಷಾಬಂಧನ ಕಾರ್ಯಕ್ರಮಗಳು ನಡೆಯಲಿವೆ.

ಫೆ.08ರಂದು ಬೆಳಿಗ್ಗೆ 9.30ರಿಂದ 10.30ರ ಒಳಗೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಉತ್ಸವದ ಪ್ರಮುಖ ಆಕರ್ಷಣೆಯಾದ ನೂತನ ದೇವಾಲಯದ ಕಳಶಾರೋಹಣಕಾರ್ಯಕ್ರಮವು ನೆರವೇರಲಿದೆ.

ನೆಲಮಂಗಲ ತಾಲ್ಲೂಕು ಡಾಬಸ್‍ಪೇಟೆ ವನಕಲ್ ಮಠದ ಡಾ.ಬಸವರಾಮಾನಂದ ಮಹಾಸ್ವಾಮಿಗಳವರು ಈ ಪುಣ್ಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಕಳಶಾರೋಹಣ ನೆರವೇರಿಸಲಿದ್ದಾರೆ.

ಅಂದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಸಂಜೆ 5 ಗಂಟೆಯಿಂದ ಕೋಲಾಟ, ಜಾನಪದ ನೃತ್ಯ ಹಾಗೂ ಭಜನೆಯಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ಗ್ರಾಮದ ಕಳೆಯನ್ನು ಹೆಚ್ಚಿಸಲಿವೆ. ಫೆ.9ರಂದು ಸಂಜೆ 4 ಗಂಟೆಯಿಂದ ಹಿರಿಯರ ಪೂಜೆ, ಬಸವನ ಗುಡ್ಡೆಯ ಪೂಜೆ ಮತ್ತು ದಾಸೋಹ ನಡೆಯಲಿದೆ.  ಫೆ. 10ರಂದು ದೇವಸ್ಥಾನದ ಸುತ್ತ ಕುರಿ ಕರೆಯುವ ವಿಶಿಷ್ಟ ಆಚರಣೆಯೊಂದಿಗೆ ಈ ಐದು ದಿನಗಳ ಧಾರ್ಮಿಕ ಉತ್ಸವ ಸಂಪನ್ನಗೊಳ್ಳಲಿದೆ.

ಧಾರ್ಮಿಕ ಸಮಾರಂಭ: ಫೆ.8ರಂದು ಮಧ್ಯಾಹ್ನ 2ಕ್ಕೆ ಹಿರಿಯ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಭವ್ಯ ಧಾರ್ಮಿಕ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಯಾದವಾನಂದ ಮಹಾಸ್ವಾಮಿಗಳು, ಶಿವಲಿಂಗಾನಂದ ಮಹಾಸ್ವಾಮಿಗಳು, ಪುರುಷೋತ್ತಮಾನಂದ ಮಹಾಸ್ವಾಮಿಗಳು ಹಾಗೂ ಬಸವ ರಮಾನಂದ ಮಹಾಸ್ವಾಮಿಗಳು, ಸದ್ಗುರು ತಿಮ್ಮಪ್ಪ ಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕರಾದ ಬಿ.ಜಿ. ಗೋವಿಂದಪ್ಪ ಉದ್ಘಾಟನೆ ನೆರವೇರಿಸುವರು.

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರು ಹಾಗೂ ಮಧುಗಿರಿ ಶಾಸಕರಾದ ಕೆ.ಎನ್. ರಾಜಣ್ಣ ಭಾಗವಹಿಸುವರು. ಸಮಾಜ ಕಲ್ಯಾಣ ಇಲಾಖೆ ಎಂ.ಡಿ ಹಾಗೂ ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಸಿ.ಸತ್ಯಭಾವ ಶಿವಲಿಂಗಪ್ಪನವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ  ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್ ಸೇರಿದಂತೆ ಮಾಜಿ ಶಾಸಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು