ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಕೂನಿಕೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಜಿ. ಹನುಮಂತರಾಯ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, "ಬಸವಣ್ಣನವರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ವಿಶ್ವ ಮಾನವ. ಅವರ 'ಕಾಯಕವೇ ಕೈಲಾಸ' ಎಂಬ ತತ್ವ ಮತ್ತು ಸಾಮಾಜಿಕ ಸಮಾನತೆಯ ಆದರ್ಶಗಳನ್ನು ಎಲ್ಲ ಜಾತಿ ಹಾಗೂ ಜನಾಂಗದವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು," ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಾಪಂ ಬಿಲ್ ಕಲೆಕ್ಟರ್ ರವಿ, ಕೆರೆಕೋಡಿ ಹಟ್ಟಿ ರಾಮಯ್ಯ, ಗ್ರಂಥಾಲಯ ಮೇಲ್ವಿಚಾರಕಿ ರೇಖಾ, ಮಾಜಿ SDMC ಅಧ್ಯಕ್ಷ ಯೋಗೇಶ್, ಪಂಚಾಯಿತಿ ನೌಕರರಾದ ಲತಾ, ಶ್ರೀವಲ್ಲಿ ಹಾಗೂ ಗಜೇಂದ್ರ, ಮಂಜುನಾಥ ಸಂಘದ ವರಲಕ್ಷ್ಮಿ ಸೇರಿದಂತೆ ಮತ್ತಿತರರು ಇದ್ದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿ ಬಸವಣ್ಣನವರ ವಿಚಾರಧಾರೆಗಳನ್ನು ಸ್ಮರಿಸಿದರು.


