ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದ ಹಾಗೂ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದ ಪ್ರಹ್ಲಾದ್ ಕುಳಿಲಿ ಅವರು, ಕೆಂಗೇರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ಪತ್ರಕರ್ತರಾದ ಪ್ರಹ್ಲಾದ ಕುಳಲಿ ಅವರ ನಿಧಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಸಂತಾಪ ವ್ಯಕ್ತಪಡಿಸಿದೆ.
ಕ್ರೀಯಾಶೀಲ ಪತ್ರಕರ್ತರಾಗಿದ್ದ ಅವರು, ವರದಿಗಾರರ ಕೂಟ ಕಟ್ಟುವಲ್ಲಿಯೂ ಕ್ರೀಯಾಶೀಲವಾಗಿ ಕೆಲಸ ಮಾಡಿದ್ದರು. ಹಿರಿಯ ಪತ್ರಕರ್ತ ಕುಳಲಿ ಅವರನ್ನು ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿತ್ತು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದಾರೆ.
ಮೃತರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ. ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ.


