Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.9ಕ್ಕೆ ಕೆಯುಡಬ್ಲ್ಯೂಜೆ ಚುನಾವಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ *"ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ.  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರಿಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. 

ಅಕ್ಟೋಬರ್-13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. 

ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. 

ನವಂಬರ್-9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ )ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು -09 ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಎಂದು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ