E-PAPER
21 Nov 2026, 02:46:40 AM|
Gold₹12977/gGold24K ₹12,977/g - 22K ₹11,885/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಯುಡಬ್ಲ್ಯೂಜೆ ನವೀಕೃತ ವೆಬ್‌ಸೈಟ್ ಅನಾವರಣಗೊಳಿಸಿದ ತ್ಯಾಗರಾಜ್‌ಗೆ ಸನ್ಮಾನ

ದತ್ತಿನಿಧಿಗೆ ಒಂದು ಲಕ್ಷ ರೂ. ದೇಣಿಗೆ ನೀಡಿದ ದಿನೇಶ್: ಅನಂತ ಚಿನಿವಾರ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ, ಪತ್ರಕರ್ತರ ಹಿತಾಸಕ್ತಿ ಮತ್ತು ಕಲ್ಯಾಣಕ್ಕಾಗಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಗಣ್ಯರು ಶ್ಲಾಘಿಸಿದರು.

ಕೆಯುಡಬ್ಲ್ಯೂಜೆಯ ನೂತನವಾಗಿ ಚುನಾಯಿತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಗುರುವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಚಿವರಾದ ಅಜಯ್ ಸಿಂಗ್ ಮತ್ತು ಬಸವಂತಪ್ಪ ಅವರು ಮಾತನಾಡಿ, ಸಮಾಜದಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾಡಿನ ಅಭಿವೃದ್ಧಿ ಹಾಗೂ ಜನಪರ ವಿಚಾರಗಳನ್ನು ಸಮಾಜದ ಮುಂದಿಡುವಲ್ಲಿ ಪತ್ರಕರ್ತರ ಕೊಡುಗೆ ಅನನ್ಯವಾದದ್ದು ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಪಿ. ತ್ಯಾಗರಾಜ್, ಪತ್ರಕರ್ತರ ಶಕ್ತಿಯುತ ಸಂಘಟನೆಯಾಗಿರುವ ಕೆಯುಡಬ್ಲ್ಯೂಜೆ ಸಂಘಟನಾತ್ಮಕವಾಗಿ ಮತ್ತು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆಯ ನವೀಕೃತ ವೆಬ್‌ಸೈಟ್‌ ಅನ್ನು ಅನಾವರಣಗೊಳಿಸಿದ ಪಿ. ತ್ಯಾಗರಾಜ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

news_1795140895_0_764.webp

 

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಚ್.ಬಿ. ದಿನೇಶ್ ಅವರು ಹಿರಿಯ ಪತ್ರಕರ್ತ ಶ್ರೀಧರ್ ಆಚಾರ್ ಅವರ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ದತ್ತಿನಿಧಿ ಸ್ಥಾಪಿಸಲು ಒಂದು ಲಕ್ಷ ರೂಪಾಯಿಗಳ ಚೆಕ್ ಹಸ್ತಾಂತರಿಸಿದರು. ಕೆಯುಡಬ್ಲ್ಯೂಜೆ ಶಿಸ್ತುಬದ್ಧ ಹಾಗೂ ವೃತ್ತಿಪರ ಚಟುವಟಿಕೆಗಳ ಮೂಲಕ ಪತ್ರಕರ್ತರ ಸಂಘಟನೆಯಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಅನಂತ ಚಿನಿವಾರ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಶಿವಾನಂದ ತಗಡೂರು ಅವರ ನೇತೃತ್ವದ ತಂಡ ಪತ್ರಕರ್ತರಿಗಾಗಿ ಶ್ಲಾಘನೀಯ ಕೆಲಸಗಳನ್ನು ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪೂರ್ಣಿಮಾ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಹಾಗೂ ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯ ರವಿಕುಮಾರ್ ಟೆಲೆಕ್ಸ್ ಅವರುಗಳು ಮಾತನಾಡಿ ಕೆಯುಡಬ್ಲ್ಯೂಜೆ ನಡೆದು ಬಂದಿರುವ ದಾರಿಯನ್ನು ಮೆಲುಕು ಹಾಕಿದರು. ಸಂಘಟನೆ ಘನತೆ ಜೊತೆಗೆ ಪತ್ರಕರ್ತರ ಸಮುದಾಯದ ಬಗ್ಗೆ ಸದಾ ಬದ್ದತೆಯನ್ನು ಪ್ರದರ್ಶಿಸುತ್ತಾ ಬಂದಿದೆ ಎಂದು ಹೇಳಿದರು.

 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ, ಭವಾನಿಸಿಂಗ ಠಾಕೂರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

ಕೆಯುಡಬ್ಲ್ಯೂಜೆ ವೆಬ್ ಸೈಟ್ ಸಿದ್ದಪಡಿಸಿದ ರವಿಕಾಂತ ಕುಂದಾಪುರ, ರಮಾಕಾಂತಗುಗ್ರಿ, ಶ್ಯಾಮ್ ಹೆಬ್ಬಾರ್ ಅವರಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.21ರಂದು ಯೋಗ ಸಂಸ್ಥೆಯ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ದತಿಯಿಂದ ಆರೋಗ್ಯ ಸಮಸ್ಯೆಪುರುಷರ ರಕ್ಷಣೆಗೂ ಪ್ರತ್ಯೇಕ ಕಾನೂನು ರೂಪಿಸಲಿಎನ್.ಪಿ.ಎಸ್ ಯೋಜನೆ: ಅಧಿಕಾರಿಗಳಿಗೆ ತರಬೇತಿಅರಣ್ಯ ಇಲಾಖೆಗೆ ಸೇರಿದ ಮರಗಳನ್ನು ಅಕ್ರಮವಾಗಿ ಹರಾಜು ಮಾಡಿದ ಗ್ರಾಮ ಪಂಚಾಯ್ತಿನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆ : ಡಿ. 07ಕ್ಕೆ ಕನ್ನಡೇತರ ನಾಮಫಲಕ ತೆರವಿಗೆ ಕನ್ನಡಪರ ಹೋರಾಟಗಾರರು ಸಿದ್ಧತೆಸರ್ಕಾರಿ ಖರಾಬ್ ಜಮೀನನ್ನು ಪ್ರಭಾವಿಗಳು ಒತ್ತುವರಿ ಮಾಡಿರುವುದನ್ನು ವಿರೋಧಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಸರ್ಕಾರಿ ಖರಾಬ್ ಜಮೀನನ್ನು ಪ್ರಭಾವಿಗಳು ಒತ್ತುವರಿ ಮಾಡಿರುವುದನ್ನು ವಿರೋಧಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಕೆಯುಡಬ್ಲ್ಯೂಜೆ ನವೀಕೃತ ವೆಬ್‌ಸೈಟ್ ಅನಾವರಣಗೊಳಿಸಿದ ತ್ಯಾಗರಾಜ್‌ಗೆ ಸನ್ಮಾನಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಜೆಡಿಎಸ್ ಜೊತೆ ಜಗಳವಿಲ್ಲ, ಗೆಲುವಷ್ಟೇ ಗುರಿ: ಅಶೋಕ್