Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಕಾರ್ಯಕರ್ತರಿಗೆ ಆಮಿಷ ಒಡ್ಡಿದರೆ ಸಹಿಸೋಲ್ಲ-ಕೆ.ವಿ.ಮಂಜುನಾಥ್

Advertisement
 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ
, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ರಾಜ್ಯ ಮಟ್ಟದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದೆಯೇ ಹೊರತು, ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ. ನಮ್ಮ ಪಕ್ಷಕ್ಕೆ ಕಾರ್ಯಕರ್ತರಿಗೆ ತನ್ನದೇ ಆದ ಶಕ್ತಿ ಇದೆ. ನಮ್ಮರನ್ನ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನ ಇಲ್ಲಿಗೆ ಬಿಡಿ ಎಂದು ಶಾಸಕ ಧೀರಜ್‌ಮುನಿರಾಜು ಅವರಿಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ವಿ ಮಂಜುನಾಥ್ ಎಚ್ಚರಿಕೆ ನೀಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ‌ ಬಾರಿಗೆ ಮಂಜುನಾಥ್ ದೊಡ್ಡಬಳ್ಳಾಪುರಕ್ಕೆ ಆಗಮಿಸಿ  ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನನ್ನ ಅವಧಿಯಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು, ಮುಖಂಡರು, ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ, ಕಾರ್ಯಕರ್ತರು ಮುಖಂಡರನ್ನು ಒಟ್ಟುಗೂಡಿಸಿ ಪಕ್ಷ ಸಂಘಟನೆ ಮಾಡುತ್ತೇನೆ.

ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಮಾಜಿ ಜಿಲ್ಲಾಧ್ಯಕ್ಷ ಬಿ.ಮುನೇಗೌಡರನ್ನು ಒಳಗೊಂಡಂತೆ ಎಲ್ಲರೂ ಪಕ್ಷ‌ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ. ಜಿಲ್ಲಾವಾರು ಪ್ರವಾಸ ಮಾಡುತ್ತೇನೆ. ನಾನು ಪ್ರತಿನಿತ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ.

ಎಲ್ಲರೂ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಬೇಕು. ಜಾತ್ಯಾತೀತವಾಗಿ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಎಲ್ಲಾ ಧರ್ಮ, ಜಾತಿಯವರನ್ನು ಒಗ್ಗೂಡಿಸಿ ಪಕ್ಷ ಕಟ್ಟುವುದೇ ನಮ್ಮ ಗುರಿ. ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು, ಹೋಬಳಿ ಸಮಿತಿ ರಚಿಸಿ, ಪ್ರತಿ ಬೂತ್ ಸಮಿತಿಯಲ್ಲಿ ಕನಿಷ್ಠ 10 ರಿಂದ 15 ಜನ ಸಕ್ರಿಯ ಕಾರ್ಯಕರ್ತರನ್ನು ಯಮತಾಯಾರು ಮಾಡಿ ಪಕ್ಷ ಬಲವರ್ಧನೆ ಮಾಡುತ್ತೇವೆ‌ ಎಂದು ತಿಳಿಸಿದರು.

ಎನ್ ಡಿಎ ಮೈತ್ರಿಕೂಟ ಇದೆ, ಆದರೆ ಪಕ್ಷಾಂತರ ಇಲ್ಲ. ನಾನು ಯಾರಿಂದಲೂ ಒತ್ತಡ ಹಾಕಿಸಿ‌ ಅಧ್ಯಕ್ಷನಾಗಿಲ್ಲ. ಪಕ್ಷದ ವರಿಷ್ಠರು ನನ್ನ ಪಕ್ಷ ನಿಷ್ಠೆ ನೋಡಿ ಈ ಜವಾಬ್ದಾರಿ ನೀಡಿದೆ. ಮುಂದಿನ 20 ದಿನಗಳಲ್ಲಿ ತಾಲೂಕು ಸಮಿತಿ ರಚನೆ ಮಾಡುತ್ತೇವೆ ಎಂದರು.

ಈ ವೇಳೆ ಹರೀಶ್ ಗೌಡ, ಡಾ.ವಿಜಯ್ ಕುಮಾರ್, ತ.ನಾ ಪ್ರಭುದೇವ್, ಪ್ರಭಾ ನಾಗರಾಜು, ವೆಂಕಟೇಶ್ ಬಾಬು, ಜಿ.ಸತ್ಯನಾರಾಯಣ,ಕೆಂಪರಾಜ್, ಗಂಟಿಗಾನಹಳ್ಳಿ ವೆಂಕಟೇಶ್ ಬಾಬು, ಅಂಜನ್ ಗೌಡ,ಹಾಡೋನಹಳ್ಳಿ ನಾಗರಾಜು ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ