Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು.

ನ್ಯೂಸ್ ರೂಮಲ್ಲಿ ಲೇಔಟ್ ಆಗಿ, ಪ್ರಿಂಟಿಂಗ್ ಪ್ರೆಸ್ ನಲ್ಲಿ ಮುದ್ರಣವಾಗುವ ಪತ್ರಿಕೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿರುವ ಓದುಗರ ಮನೆ ಬಾಗಿಲಿಗೆ ತಲುಪಿಸಲು ಪತ್ರಿಕಾ ವಿರತಕರ ನರ ಮಂಡಲ ವ್ಯವಸ್ಥಿತವಾಗಿರಬೇಕು. ನ್ಯೂಸ್ ರೂಮುಗಳು ಎಷ್ಟೇ ಹೈಟೆಕ್ ಆಗಿದ್ದರೂ, ಪ್ರಿಂಟಿಂಗ್ ಪ್ರೆಸ್ ಗಳು ಎಷ್ಟೇ ಅಡ್ವಾನ್ಸ್ ಆಗಿದ್ದರೂ ಪತ್ರಿಕಾ ವಿತರಕರ ನರಮಂಡಲ ಸರಿಯಾಗಿ ಇಲ್ಲ ಅಂದರೆ ಪ್ರಯೋಜನವಿಲ್ಲ ಎಂದು ವಿಶ್ಲೇಷಿಸಿದರು. 

ಪತ್ರಿಕಾ ವಿತರಕರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನಲೆಯುಳ್ಳವರಾಗಿದ್ದು, ವಿದ್ಯಾರ್ಥಿಗಳಿಂದ ವಯಸ್ಕರವರೆಗೂ ಪ್ರತಿನಿತ್ಯ ಸೂರ್ಯ ಉದಯಿಸುವ ಮೊದಲೇ ಚಳಿ, ಮಳೆ ಎನ್ನದೆ ಪತ್ರಿಕೆಯನ್ನು ಮನೆ ಮನೆ ತಲುಪಿಸುತ್ತಾರೆ. ಅವರ ಸೇವೆ ಶ್ಲಾಘನೀಯ ಎಂದರು.ಪತ್ರಿಕೆ ವಿತರಕ ವಿದ್ಯಾರ್ಥಿಗಳು ಓದಿನ ಜೊತೆಗೆ ದುಡಿಮೆಯಲ್ಲೂ ತೊಡಗುತ್ತಾರೆ.

ಇದು ಅವರ ಕುಟುಂಬಕ್ಕೆ ಮತ್ತು ನಾಡಿನ ಆರ್ಥಿಕತೆಗೂ ಅವರ ಪಾಲಿನ ಕೊಡುಗೆ ಕೊಟ್ಟಂತೆ ಎಂದರು.ಪತ್ರಿಕೆ ವಿತರಕರ ಸಮಗ್ರ ಕಲ್ಯಾಣಕ್ಕೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡಬೇಕು. ಉಚಿತ ಪಡಿತರ, ವಿದ್ಯಾರ್ಥಿ ವೇತನ ನೀಡಬೇಕು. ಜೀವವಿಮೆ, ಹೆಲ್ತ್ ಕಾರ್ಡ್ ನೀಡಬೇಕು. ಬೈಕ್/ ಸೈಕಲ್  ಖರೀದಿಸಲು ಶೇ.50 ರಷ್ಟು ರಿಯಾಯ್ತಿ ಒದಗಿಸಬೇಕು, ಜರ್ಕೀನ್ ಗಳನ್ನು ಒದಗಿಸಬೇಕು. ಜೀವ ವಿಮೆ ಮಾಡಿಸಿಕೊಡಬೇಕು ಎನ್ನುವ ಬಹು ವರ್ಷಗಳ ಬೇಡಿಕೆಗಳಿವೆ. ಎಲ್ಲವನ್ನೂ ಸರ್ಕಾರವೇ ನೇರವಾಗಿ ಒದಗಿಸುವುದು ಕಷ್ಟ. ಹೀಗಾಗಿ ಮಾಧ್ಯಮ‌ಸಂಸ್ಥೆಗಳು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR fund ಬಳಸಿಕೊಂಡು ಈ ಬೇಡಿಕೆಗಳಲ್ಲಿ ಬಹಳಷ್ಟನ್ನು ಈಡೇರಿಸಬಹುದು ಎಂದರು.

ನಾನೂ ಕೂಡ ಮಾಧ್ಯಮ ಸಂಸ್ಥೆಗಳು, ಸರ್ಕಾರ ಮತ್ತು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR Fund ನೆರವಿನಿಂದ ಏನೆಲ್ಲಾ ಮಾಡಬಹುದು ಎನ್ನುವ ಬಗ್ಗೆ plan ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇವೆಲ್ಲಾ ಸಾಕಾರಗೊಳ್ಳಬಹುದು ಎನ್ನುವ ನಿರೀಕ್ಷೆ ಇದೆ ಎಂದರು.

ತರಳಬಾಳು ಶ್ರೀಗಳಾಗದ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಆರ್ ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ ಸಂಕೇಶ್ವರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾ ಉಸ್ತುವಾರಿ ಸಚಿವರು ಸುದಾಕರ್, ಸಂಸದ ಗೋವಿಂದ ಕಾರಜೋಳ, ಶಾಸಕರು , ಹಿರಿಯ ಪತ್ರಕರ್ತ ನಾಗಣ್ಣ, ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜವರಪ್ಪ, ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ, ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಲಕ್ಷ್ಮಿನಾರಾಯಣ್ ಕಾರ್ಯಕ್ರಮ ನಿರೂಪಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ