Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಕೆಯುಡಬ್ಲೂಜೆ ನಿಯೋಗ ಆಗ್ರಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೈಜ ಪತ್ರಕರ್ತರ ಮೇಲೆ ವಿನಾ ಕಾರಣ ತೇಜೋವಧೆ ಮಾಡುವ ನಕಲಿ ಮತ್ತು ಆರ್‌ಟಿಐ ಪತ್ರಕರ್ತರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಪೊಲೀಸ್ ಮಹಾ ನಿರ್ದೇಶಕರನ್ನು ಒತ್ತಾಯಿಸಿದೆ.

 

Advertisement

ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಈ ಬಗ್ಗೆ ಮನವಿ ಸಲ್ಲಿಸಿತು.

 

ಪತ್ರಿಕೆಗಳನ್ನೆ ತರದವರು, ಸುದ್ದಿಯನ್ನು ಬರೆಯಲು ಬಾರದವರು ಮತ್ತು ಸುದ್ದಿ ಮನೆಗೆ ಯಾವ ರೀತಿಯ ಸಂಬಂಧವೂ ಇಲ್ಲದವರು ತಾವೇ ಪತ್ರಕರ್ತರು ಎಂದು ಬಿಂಬಿಸಿಕೊಳ್ಳುವ ವಿಸಿಟಿಂಗ್ ಕಾರ್ಡ್ ಪತ್ರಕರ್ತರು, ನೆಪ ಮಾತ್ರಕ್ಕೆ ಸಂಘಟನೆ ಮಾಡಿಕೊಂಡು, ಬ್ಲಾಕ್ ಮೇಲ್ ಮಾಡುವ ಆರ್‌ಟಿಐ ಪತ್ರಕರ್ತರ ವಸೂಲಿ ದಂಧೆಯೂ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಈ ಬೆಳವಣಿಗೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ವಿನಂತಿಸಿದರು.

 

ಪತ್ರಿಕಾ ಸಂಘಟನೆಯ ಹೆಸರು ಹೇಳಿಕೊಳ್ಳುವ ಕೆಲ ನಕಲಿ ಪತ್ರಕರ್ತರು ಆಗಿಂದಾಗ್ಗೆ ಪೊಲೀಸ್ ಠಾಣೆಗೆ ದೂರು ಕೊಡುವುದು, ಆರ್‌ಟಿಐ ಹಾಕುವುದನ್ನೆ ತಮ್ಮ ಕಾಯಕವಾಗಿಸಿಕೊಂಡಿದ್ದಾರೆ. ಇಂಥವರನ್ನು ಪೊಲೀಸ್ ಠಾಣೆಯಲ್ಲೂ ಬ್ಲಾಕ್ ಲಿಸ್ಟ್‌ನಲ್ಲಿ ಸೇರಿಸಿ ಕ್ರಮ ಜರುಗಿಸಬೇಕು ಎಂದು ಪೊಲೀಸ್ ಮಾಹಾನಿರ್ದೇಶಕರಿಗೆ ಮನದಟ್ಟು ಮಾಡಿಕೊಡಲಾಯಿತು.

 

ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸುವುದಾಗಿ ಪೊಲೀಸ್ ಮಾಹಾನಿರ್ದೇಶಕರು, ಕೆಯುಡಬ್ಲೂೃಜೆ ನಿಯೋಗಕ್ಕೆ ಭರವಸೆ ನೀಡಿದರು.

 

ನಿಯೋಗದಲ್ಲಿ ಕೆಯುಡಬ್ಲೂಜೆ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾದ ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇ ಹೊಳ್ಳ ಅವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು