Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ ರೈತರೊಂದಿಗೆ ಜುಲೈ-15ರಂದು ಸಭೆ ನಡೆಸಿದ ನಂತರ ಭೂ ಸ್ವಾಧೀನ ತೀರ್ಮಾನ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇವನಹಳ್ಳಿ ತಾಲೂಕಿನಲ್ಲಿ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ  ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ-15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದ ರೈತ ಹೋರಾಟಗಾರರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿ ಮಾತನಾಡಿದರು.
ವಿಧಾನಸೌಧದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯ ಮುಖ್ಯಾಂಶಗಳು:


ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.

ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ.

ಕಾನೂನು - ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.

ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.

ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ