Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂಸ್ವಾಧೀನ ದರ ಪರಿಷ್ಕರಣೆ:ಕೃಷ್ಣ ಬೈರೇಗೌಡ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಜಮೀನುಗಳ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದು ಮಾತ್ರವೇ ಸೂಕ್ತ ಪರಿಹಾರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.


ವಿಧಾನ ಪರಿಷತ್‍ಅಧಿವೇಶನದಲ್ಲಿ ಸದಸ್ಯರಾದ ಕೆ.ಎಸ್. ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಸ್ವಾಧೀನ ಕಾಯ್ದೆ 2013ರಡಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಜಮೀನುಗಳಿಗೆ ಮೌಲ್ಯಗಳನ್ನು ನಿಗದಿಪಡಿಸಲು ಭೂಸ್ವಾಧೀನ ಅಧಿಸೂಚನೆ ಹೊರಡಿಸಿರುವ ದಿನಾಂಕದ ಹಿಂದಿನ ಮೂರು ವರ್ಷಗಳ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಮಾರಾಟವಾದ ಕ್ರಯಗಳನ್ನು ಪಡೆದು, ಸದರಿ ಕ್ರಯಗಳಲ್ಲಿ ಅತಿ ಹೆಚ್ಚು ದರಕ್ಕೆ ಮಾರಾಟವಾದ ಶೇ.50 ರಷ್ಟು ಕ್ರಯಗಳನ್ನು ಪರಿಗಣಿಸಿ ಅದರನ್ವಯ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ದರ ನಿಗದಿಪಡಿಸಲಾಗುತ್ತಿದೆ.

ಮುಂದುವರಿದು ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ದರ ನಿಗಧಿಪಡಿಸುವಲ್ಲಿ ಭೂಸ್ವಾಧೀನ ಕಾಯ್ದೆಯ ಮಾನದಂಡಗಳನ್ವಯ ದರ ನಿಗಧಿಪಡಿಸಲಾಗುತ್ತಿದ್ದು, ಸದರಿ ದರಕ್ಕೆ ಪ್ರಾಥಮಿಕ ಅಧಿಸೂಚನೆ ದಿನಾಂಕದಿಂದ ಐತೀರ್ಪು ಘೋಷಣೆಯ ದಿನಾಂಕದವರೆಗಿನ ದಿನಗಳಿಗೆ ಮೂಲ ಮಾರುಕಟ್ಟೆ ಮೌಲ್ಯಕ್ಕೆ ಶೇ.12 ರಷ್ಟು ಹೆಚ್ಚುವರಿ ಮಾರುಕಟ್ಟೆ ಮೌಲ್ಯಗಳನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ