Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿವಿಲ್ ಪ್ರಕರಣಗಳ ಕರಡು ರಚನೆಗೆ ಭಾಷಾ ಕೌಶಲ್ಯ ಮುಖ್ಯ-ನ್ಯಾ.ರೋಣ್ ವಾಸುದೇವ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಿವಿಲ್ ಪ್ರಕರಣಗಳ ಕರಡು ರಚನೆಗೆ ಭಾಷಾ ಕೌಶಲ್ಯ ಅತಿ ಮುಖ್ಯವಾಗಿದೆ. ಸರಳವಾಗಿ ಮಾತೃಭಾಷೆ ಕನ್ನಡದಲ್ಲಿ ಪ್ರಕರಣದ ಕರಡು ಸಿದ್ಧಪಡಿಸಿದರೆ ಅನಗತ್ಯವಾಗಿ ಉಂಟಾಗುವ ಗೊಂದಲಗಳನ್ನು ನಿವಾರಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ರೋಣ್ ವಾಸುದೇವ ಅಭಿಪ್ರಾಯ ವ್ಯಕ್ತಪಡಿಸಿದರು.


ನಗರದ ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ಸಂಜೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ, ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ, ಸಿವಿಲ್ ಪ್ರಕರಣಗಳಲ್ಲಿ ಡ್ರಾಪ್ಟಿಂಗ್ ಕೌಶಲ್ಯ ಕುರಿತು ಅವರು ಉಪನ್ಯಾಸ ನೀಡಿದರು.


ಆಸ್ತಿ ಹಕ್ಕಿಗಾಗಿ ಕಕ್ಷಿದಾರರು ಸಿವಿಲ್ ದಾವೆಗಳನ್ನು ನ್ಯಾಯಾಲಯಗಳಲ್ಲಿ ಹೂಡುತ್ತಾರೆ. ಕ್ರಿಮಿನಲ್ ಪ್ರಕರಣಗಳಲ್ಲಿ ನೇರವಾಗಿ ಕಾಯ್ದೆಗಳನ್ನು ಉಲ್ಲೇಖಿಸಿ ಕಕ್ಷಿದಾರರ ಪ್ರಕರಣದ ಕರಡು ಸಿದ್ದಪಡಿಸಬಹುದು. ಆದರೆ ಸಿವಿಲ್ ಪ್ರಕರಣಗಳಲ್ಲಿ ಕಾಯ್ದೆಗಳ ಉಲ್ಲೇಖಿಸುವುದರಿಂದ ಗೊಂದಲ ಹೆಚ್ಚಾಗುತ್ತದೆ.

ಇದರ ಬದಲಿಗೆ ಸರಳವಾಗಿ ಕಕ್ಷಿದಾರರ ಪರವಾದ ವಿಷಯಗಳನ್ನು ಕರಡಿನಲ್ಲಿ ಸ್ಪಷ್ಟಪಡಿಸಬೇಕು. ಕ್ಲಿಷ್ಟಕರ ಶಬ್ದಗಳನ್ನು ಬಳಸಬಾರದು. ಅಸಲು ದಾವೆ ಮಾಹಿತಿಗಳನ್ನು ಕರಡಿನಲ್ಲಿ ನೀಡಿದರೆ ಸಾಕು, ಅನಗತ್ಯವಾಗಿ ದೊಡ್ಡ ಕರಡು ರಚನೆ ಮಾಡಬಾರದು. ವ್ಯಾಜ್ಯದ ಕರಡು ನ್ಯಾಯಧೀಶರು ಸುಲಭವಾಗಿ ಅರ್ಥವಾದರೆ ಪಕ್ರರಣಗಳಲ್ಲಿ ಬೇಗ ಪರಿಹಾರದ ದೊರಕುವುದು. ಕಕ್ಷಿದಾರರ ಸಮಯವು ವ್ಯರ್ಥವಾಗುವುದಿಲ್ಲ ಎಂದು ರೋಣ್ ವಾಸುದೇವ ಹೇಳಿದರು.


ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿನ ದುರ್ಬಲ ಹಾಗೂ ನಿಮ್ನ ವರ್ಗದವರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಪೊಕ್ಸೋ, ಬಾಲ್ಯವಿವಾಹ ಸೇರಿದಂತೆ ಸಾಮಾಜಿಕ ಪಿಡುಗುಗಳ ಕುರಿತು ಪ್ರಸಕ್ತ ವರ್ಷದಲ್ಲಿ 300 ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

3 ಲೋಕ ಅದಾಲತ್‍ನಲ್ಲಿ 11,744 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಇದರ ಹೊರತಾಗಿ ಜಿಲ್ಲಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯುವಂತೆ ಕಾಳಜಿ ವಹಿಸಲಾಗಿದೆ. ಬಸ್ ಸಂಪರ್ಕ ಕಾಣದ ಜೆ.ಎನ್.ಕೋಟೆ ಗೊಲ್ಲರಹಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ದೊರಕಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಪ್ರಮುಖ ಪಾತ್ರ ವಹಿಸಿದೆ. ಪ್ರಾಧಿಕಾರದೊಂದಿಗೆ 91 ಪ್ಯಾನಲ್ ವಕೀಲರು, 8 ಕಾನೂನು ಅಭಿರಕ್ಷಕರು ಹಾಗೂ 90 ನ್ಯಾಯಿಕ ಸಹಾಯಕರು ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.


ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಮಹೇಶ್ವರಪ್ಪ, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳಾದ ವೀರಣ್ಣ ಸೋಮಶೇಖರ್, ಗಂಗಾಗಧರ ಚನ್ನಬಸಪ್ಪ ಹಡಪದ್, ಮಮತ.ಡಿ, ಚೈತ್ರ ಎ.ಎಂ, ಉಜ್ವಲ ವೀರಣ್ಣ ಸಿದ್ದಣ್ಣವರ್, ರಶ್ಮಿ ಎಸ್ ಮರಡಿ, ಪೂಜಾ ಬೆಳಕೇರಿ, ನಿಖಿತಾ ಎಸ್ ಅಕ್ಕಿ, ಆರ್.ಸಹನಾ,  ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ್ ಗುಂಡೇರಿ ಸೇರಿದಂತೆ ವಕೀಲರು, ಕಾನೂನು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ