Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪಟಾಪ್ ವಿತರಣೆ: ಕಂದಾಯ ಸಚಿವ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮ
ಲೆಕ್ಕಾಧಿಕಾರಿಗಳು ಒಂದು ಕಡೆ ಕೂತು ಕೆಲಸ ಮಾಡಲು ಸಹಾಯವಾಗುವಂತೆ ಛಾವಡಿಗೆ ಪರ್ಯಾಯವಾಗಿ ಸ್ಥಳವಕಾಶವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಿ ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಕೂಡಲು ಅವಕಾಶ ಮಾಡಿಕೊಡಲು ಯೋಜಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸದನದಲ್ಲಿಂದು ಪರಿಷತ್ ಸದಸ್ಯ ಕೇಶವ ಪ್ರಸಾದ್ .ಎಸ್ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು ಗ್ರಾಮಲೆಕ್ಕಾಧಿಕಾರಿಗಳಿಗೆ ಒದಗಿಸುವ ಛಾವಡಿಗಳು ರಾಜ್ಯದಲ್ಲಿ ಬಹುತೇಕ ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ, ಅವುಗಳು ಈಗಾಗಲೇ ಹಲವು ದಶಕಗಳ ಹಿಂದೆ ಕಟ್ಟಲ್ಪಟ್ಟವು, ಅವುಗಳನ್ನು ರಾಜ್ಯ ಮಟ್ಟದಲ್ಲಿ ಒಂದೇ ಸಮಯದಲ್ಲಿ ಪುನರ್ ನಿರ್ಮಾಣ ಅಥವಾ ದುರಸ್ತಿ ಮಾಡುವುದಕ್ಕಿಂತ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಸರ್ಕಾರ ಚಿಂತಿಸುತ್ತಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಜೊತೆಗೆ ಪ್ರಯಾಣ ಭತ್ಯೆ ಸಹ ಒದಗಿಸಲಾಗುತ್ತಿದೆ.
2024-25
ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಡಿಜಿ ಕಂದಾಯ ಯೋಜನೆಯಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪಟಾಪ್ ವಿತರಣೆ ಮಾಡುವ ಉದ್ದೇಶ ಹೊಂದಿದ್ದು, ಈಗಾಗಲೇ 4000 ಲ್ಯಾಪ್ ಟಾಪ್ಗಳನ್ನು ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

 




Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ