Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗ ಕಲ್ಪಿಸಲು  ಅಧಿನಿಯಮ ಜಾರಿ- ಸಚಿವ ಸುಧಾಕರ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಜಾರಿಗೊಳಿಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

 ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದರು.
ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ರಾಜ್ಯದಲ್ಲಿ ದೇಶಿಯ ಹಾಗೂ ವಿದೇಶಿಯ ಕಂಪನಿಗಳಲ್ಲಿ ಉದ್ದಿಮೆ ಸ್ಥಾಪಿಸಬೇಕಾದರೆ, ಕನ್ನಡಿಗರಿಗೆ ಕಡ್ಡಾಯ ಉದ್ಯೋಗದ ಅವಕಾಶಗಳನ್ನು ಕಲ್ಪಿಸಬೇಕು.

ಅಂತಹ ಕಂಪನಿಗಳಿಗೆ ಮಾತ್ರ ಸರ್ಕಾರದಿಂದ ಉದ್ದಿಮೆ ಸ್ಥಾಪನೆಗೆ ಅನುಮತಿ ನೀಡಲಾಗುವುದು. ಕನ್ನಡ ಭಾಷೆಯ ಉಳಿವಿಗಾಗಿ ಬೆಳವಣಿಗೆಗಾಗಿ ನಮ್ಮ ಸರ್ಕಾರ ನಾನಾ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಕಾವಲು ಸಮಿತಿ ನೇಮಿಸಿ ಆಡಳಿತ ಭಾಷೆಯಾಗಿ ಕನ್ನಡ ಕಡ್ಡಾಯ ಮಾಡಿದೆ. ಹಾಗೆಯೇ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್ ಧರಿಸುವಂತೆ ಸೂಚಿಸುವುದರ ಮೂಲಕ ಕನ್ನಡಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದರು.

ಕನ್ನಡ ಭಾಷೆ ಬಾರದಿರುವ ಉದ್ಯೋಗಿಗಳಿಗೆ ಕನ್ನಡ ಕಲಿಸಲು ಕನ್ನಡ ಕಲಿಕಾ ಘಟಕವನ್ನು ಸ್ಥಾಪಿಸಿ ಸರ್ಕಾರವು ಅಗತ್ಯ ಬೋಧಕ ಸಿಬ್ಬಂದಿ ಮತ್ತು ಕಲಿಕಾ ಸಾಮಗ್ರಿಯನ್ನು ಒದಗಿಸಲು ಹಾಗೆಯೇ ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ ಅಲ್ಲಿಯೂ ಕನ್ನಡ ಬಳಕೆಯಾಗುತ್ತಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಹಿಂದಿನ ರಾಜಮಹಾರಾಜರಂತೆ ಕನ್ನಡವನ್ನು ಉಳಿಸಿ ಬೆಳೆಸಿ ಮುಂದಿನ ತಲೆಮಾರುಗಳಿಗೆ ನಮ್ಮ ಪರಂಪರೆ, ಸಂಸ್ಕೃತಿ, ಇತಿಹಾಸ ತಲುಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಕನ್ನಡ ಬೆಳೆಸಲು ಸರ್ಕಾರಕ್ಕೆ ಮಾತ್ರ ಬಿಡದೆ ಜನರೂ ಕೈ ಜೋಡಿಸಬೇಕು ಎಂದರು.

ಕನ್ನಡಕ್ಕೆ ಜಿಲ್ಲೆಯ ಕೊಡುಗೆ ಅಪಾರ: ಮೊಟ್ಟ ಮೊದಲು ಕನ್ನಡ ಸಾಮಾಜ್ಯದ ಸ್ಥಾಪನೆಗೆ ಅಡಿಪಾಯ ಹಾಕಿದ ನೆಲ ಚಿತ್ರದುರ್ಗ. ಕದಂಬರ ಮಯೂರ ವರ್ಮ ಬನವಾಸಿ ಪ್ರದೇಶದಿಂದ ಉನ್ನತ ವಿದ್ಯಾಭ್ಯಾಸಕ್ಕೆ ಕಂಚಿಗೆ ಹೋಗಿ ಅಲ್ಲಿ ತಮಿಳು ಪಲ್ಲವರಿಂದ ಅವಮಾನಿತರಾಗಿ ನಾನು ಒಂದು ಕನ್ನಡ ಸಾಮ್ರಾಜ್ಯವನ್ನು ಕನ್ನಡಿಗರಿಗಾಗಿ ಕಟ್ಟುತ್ತೇನೆ.

ನಿಮ್ಮಂತೆ ಆಳುತ್ತೇನೆಎಂದು ಪ್ರತಿಜ್ಞೆ ಮಾಡಿ ಸಾಮ್ರಾಜ್ಯ ಕಟ್ಟಲು ಬಂದಿದ್ದು, ಚಿತ್ರದುರ್ಗದ ಚಂದ್ರವಳ್ಳಿಯಲ್ಲಿ ದಟ್ಟವಾದ ಅಡವಿ ಧವಳಪ್ಪ ಗುಡ್ಡದಲ್ಲಿ ಇಲ್ಲಿನ ಕನ್ನಡಿಗರ ಸಹಾಯದಿಂದ ಸೈನ್ಯಕಟ್ಟಿ ಸಾವಿರಾರು ಸೈನಿಕರನ್ನು ಗೆರಿಲ್ಲಾ ತಂತ್ರದಿಂದ ಕಟ್ಟಿಹಾಕಲಾಯಿತು. ಇದರಿಂದಾಗಿ ಕೊನೆಗೆ ಸ್ವತಃ ಪಲ್ಲವರೇ ಇಲ್ಲಿಂದ ಇಲ್ಲಿಯವರೆಗೆ ನಿನ್ನದೇ ರಾಜ್ಯ ಎಂದು ಕೈಯಾರೆ ಕಿರೀಟಧಾರಣೆ ಮಾಡಿದರು ಎಂದು ತಿಳಿಸಿದ ಅವರು,

ಅಲ್ಲಿಂದ ಉದಯವಾದ ಕನ್ನಡ ಸಾಮ್ರಾಜ್ಯಕ್ಕೆ ನಂತರ ಕದಂಬ ರಾಜರು ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸಕ್ಕೆ ಪ್ರೋತ್ಸಾಹ ನೀಡಿದರು. ಕನ್ನಡ ಲಿಪಿರೂಪ ಪಡೆದು ನಾಡಿನ ಅಭಿವೃದ್ಧಿಯಾಯಿತು. ಇದಕ್ಕೆ ಸಾಕ್ಷಿಯಾಗಿ ಚಂದ್ರವಳ್ಳಿಯ ದೇವಾಲಯದ ಮುಂದೆ ದೊಡ್ಡ ಬರಹದ ಶಾಸನವಿದೆ.

ಹಾಗೆಯೇ ಶಾಸನ ಅತ್ಯಂತ ಪ್ರಾಚೀನಕಲೆಯೂ ಇಲ್ಲಿದೆ. ಇದುವರೆಗೆ ದೊರಕಿರುವ ಮೊದಲ ಕನ್ನಡ ಪದ್ಯ, ತಮಟಕಲ್ಲಿನ ಮೊದಲ ಶಾಸನದಲ್ಲಿದೆ. ಗುಣಮಧುರ ಎಂಬ ರಾಜನ ಗುಣಗಾನ ಮಾಡುವ ಈ ಪದ್ಯ ಕನ್ನಡದ ಭಾಷೆಯ ಶ್ರೇಷ್ಠತೆಯ ಉದಾಹಣೆಯಾಗಿದೆ. ಹೀಗೆ ಚಿತ್ರದುರ್ಗ ಜಿಲ್ಲೆಯು ಕನ್ನಡಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ ಎಂಬುದು ಹಾಗೂ ಅದರ ವಾರಸುದಾರರು ನಾವು ಎಂಬುದು ನಮಗೆ ಅಭಿಮಾನ ಪಡುವಂಥದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ