Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಮೇಲಿರುವ ಅಪಾರ ಭಕ್ತಿ, ಶ್ರದ್ದೆ ಬದುಕನ್ನು ಪಾವನಗೊಳಿಸಲಿದೆ: ಶಾಸಕ ಟಿ.ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ದೇವರ ಮೇಲೆ ಅಪಾರವಾದ ಭಕ್ತಿ ಮತ್ತು ಶ್ರದ್ದೆ ಇಂದಿಗೂ ನಮ್ಮಲ್ಲಿ ಜೀವಂತವಾಗಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರತಿವರ್ಷವೂ ತಪ್ಪದೆ ಮಾಡುವ ಮೂಲಕ ಭಗವಂತನ ಅನುಗ್ರಹ ಪಡೆಯಲು ನಾವೆಲ್ಲರೂ ಉತ್ಸವಗಳನ್ನು ಹಮ್ಮಿಕೊಳ್ಳುತ್ತೇವೆ. ಪ್ರತಿಯೊಬ್ಬರ ಬದುಕಿನಲ್ಲಿ ಸುಖ
, ಶಾಂತಿ, ನೆಮ್ಮದಿ ಕರುಳಿಸಲು ಭಗವಂತನಿಂದ ಮಾತ್ರ ಸಾಧ್ಯವೆಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಭಾನುವಾರ ತಾಲ್ಲೂಕಿನ ದೊಡ್ಡಬೀರನಹಳ್ಳಿಗ್ರಾಮದ ಜುಂಜಪ್ಪಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಕರೀಕೆರೆ ಗ್ರಾಮದ ಶ್ರೀಓಬಳ ನರಸಿಂಹಸ್ವಾಮಿ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆರೆದಿದ್ದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಮೂರನೇ ಬಾರಿಗೆ ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಜನತೆ ಮತ್ತು ದೇವರಿಗೆ ವಂದಿಸುತ್ತೇನೆ. ಕ್ಷೇತ್ರದ ಯಾವುದೇ ಭಾಗದಲ್ಲಾದರೂ ಧಾರ್ಮಿಕ ಕಾರ್ಯಗಳು ನಡೆದರೂ ತಪ್ಪದೆ ಭಾಗವಹಿಸುತ್ತೇನೆ.

ಎಲ್ಲರ ಕಷ್ಟಗಳನ್ನು ಪರಿಹರಿಸುವ ಶಕ್ತಿ ದೇವರಲ್ಲಿ ಮಾತ್ರ ಇದೆ ಎಂಬ ನಂಬಿಕೆ ಇಂದಿಗೂ ನಮ್ಮಲ್ಲಿ ಅಚಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ಗ್ಯಾರಂಟಿ ಸಮಿತಿ ಸದಸ್ಯ ಅನಿಲ್‌ ಕುಮಾರ್, ಜಿಪಂ ಕೆಡಿಪಿ ಸದಸ್ಯ ಓ.ರಂಗಸ್ವಾಮಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಈರಣ್ಣ, ಜಯಣ್ಣ, ಸುರೇಶ್, ಬೋಪಣ್ಣ, ನಾಗರಾಜು, ಗ್ರಾಮ ಪಂಚಾಯಿತಿ ಸದಸ್ಯ ಡಿ.ರಾಜಪ್ಪ, ಮಂಜುನಾಥ, ಭೀಮಾರೆಡ್ಡಿ, ಯಂಜಾರೆಡ್ಡಿ, ವೆಂಕಟೇಶ್, ಕೃಷ್ಣಪ್ಪ ಮುಂತಾದವರು ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ