Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೂ ಎಸೆದ ನ್ಯಾಯವಾದಿ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿರವರ ಮೇಲೆ ನ್ಯಾಯಾಲಯದ ಕಾರ್ಯಕಲಾಪದ ವೇಳೆಯಲ್ಲಿ ಶೂ ಎಸೆದು ಅಗೌರವ ಮಾಡಿರುವ ನ್ಯಾಯವಾದಿ ರಾಕೇಶ್ ಕಿಶೋರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸಮಾನ ಮನಸ್ಕರ ವಕೀಲರ ಬಳಗದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಷ್ಟ್ರಪತಿರವರಿಗೆ ಮನವಿ ಸಲ್ಲಿಸಲಾಯಿತು.


ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನ್ಯಾಯವಾದಿ ಬೀಸ್ನಳ್ಳಿ ಜಯಣ್ಣ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ವಕೀಲ ರಾಕೇಶ್ ಕಿಶೋರ್ ಸಂವಿಧಾನಕ್ಕೆ ಅವಮಾನ ಮಾಡಿರುವುದು ಕ್ಷಮಿಸಲಾರದಂತ ಅಪರಾಧ, ಇದರ ಹಿಂದೆ ಪಟ್ಟಭದ್ರಾ ಹಿತಾಸಕ್ತಿಗಳ ಕೈವಾಡವಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ ಮುಖ್ಯ ನ್ಯಾಯಮೂರ್ತಿ ಗವಾಯಿರವರಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರುಗಳಾದ ಎಸ್.ವಿಜಯಕುಮಾರ್, ದಿಲ್‌ಶಾದ್ ಉನ್ನಿಸ, ಬಿ.ಎಂ.ಹನುಮಂತಪ್ಪ, ಚಂದ್ರಣ್ಣ, ಜಗದೀಶ್ ಗುಂಡೇರಿ, ಸುದರ್ಶನ್, ಗಂಗಾಧರ್, ಅಶೋಕ್‌ ಬೆಳಗಟ್ಟ, ಸುರೇಶ್, ದಿವ್ಯಚಂದ್ರ, ಕವಿ ಅರಸಿ, ಅನುಷ ಬಿಂದು ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ