Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದನಕ್ಕಿಂತ ದೊಡ್ಡವರಲ್ಲ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋತ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ.


ನಾನು ಯಾವುದೇ ಪಕ್ಷಪಾತ ಮಾಡಿಲ್ಲ ಎಂದಿರುವ ಓಂ ಬಿರ್ಲಾ, ಪ್ರತಿ ಸಂಸದರಿಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಸಿಗುವಂತೆ ನೋಡಿಕೊಳ್ಳಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ. ವಿರೋಧ ಪಕ್ಷದ ನಾಯಕರು ಸದನಕ್ಕಿಂತಲೂ ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ.
ನಿನ್ನೆ ವಿಪಕ್ಷದ ಅವಿಶ್ವಾಸ ನಿರ್ಣಯವು ಲೋಕಸಭೆಯಲ್ಲಿ ಸೋತಿತ್ತು.

ಇದಾದ ಒಂದು ದಿನದ ನಂತರ, ಸ್ಪೀಕರ್ ಓಂ ಬಿರ್ಲಾ ಗುರುವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಥವಾ ಇತರ ಸದಸ್ಯರನ್ನು ಸದನದಲ್ಲಿ ಮಾತನಾಡದಂತೆ ತಡೆಯಲಾಗಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ. ಪ್ರತಿಯೊಬ್ಬ ಸಂಸದರಿಗೂ ನಿಯಮಗಳ ಪ್ರಕಾರ ಮಾತನಾಡುವ ಹಕ್ಕಿದೆ. ನಾನು ಆ ಅವಕಾಶ ನೀಡಿದ್ದೇನೆ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಪಾದಿಸಿದ್ದಾರೆ.

ಫೆಬ್ರವರಿ 13ರಂದು ಕೊನೆಗೊಂಡ ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ ನಂತರ ಗುರುವಾರ ಓಂ ಬಿರ್ಲಾ ಮೊದಲ ಬಾರಿಗೆ ಸದನಕ್ಕೆ ಬಂದರು.


ಅಧಿವೇಶನದ ಎರಡನೇ ಭಾಗ ಮಾರ್ಚ್ 9ರಂದು ಪ್ರಾರಂಭವಾಯಿತು. ವಿರೋಧ ಪಕ್ಷಕ್ಕೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ಸದನವು ಸ್ಥಾಪಿತ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನವನ್ನು ಉದ್ದೇಶಿಸಿ ಮಾತನಾಡುವ ಮೊದಲು ಸ್ಪೀಕರ್​ರಿಂದ ಅನುಮತಿ ಪಡೆಯಬೇಕು. ಲೋಕಸಭೆಯ ನಿಯಮಗಳಿಗಿಂತ ಯಾರೂ ಮೇಲಲ್ಲ ಎಂದು ಅವರು ಒತ್ತಿ ಹೇಳಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ