Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಲ್ಮೀಕಿ ಅವರ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಬಳ್ಳಾರಿಯಲ್ಲಿ ಬ್ಯಾನರ್‌ಗಲಭೆ ಪ್ರಕರಣದ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ವಿಜಯೇಂದ್ರ ಮಾತನಾಡಿದರು.


ಸ್ಥಳೀಯ ನಾಯಕರು ಇಲ್ಲಿ ಪುತ್ಥಳಿ ಆಗಬೇಕು ಎಂದು ಕೈಗೊಂಡಿರುವ ತೀರ್ಮಾನ ಸರಿಯಾಗಿದೆ. ಡಿ.24 ರಿಂದ ಡಿ.29 ರವರೆಗೆ ಈ ಜಿಲ್ಲೆಯ ಜನ ಬಹಳ ಸಂಭ್ರಮದಿಂದ ಪುತ್ಥಳಿ ಸ್ವಾಗತ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಿದ್ದರು.

 ಈಗ ಕೇವಲ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದಿದೆ. ಜ.1 ರಂದು ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಕಟ್ಟಿದ್ದಾರೆ. ಬ್ಯಾನರ್ ಕಟ್ಟುವ ವಿಚಾರದಲ್ಲಿ ಜನಾರ್ದನ ರೆಡ್ಡಿ ಅಥವಾ ಶ್ರೀರಾಮುಲು ಅವರಿಗೆ ಅಸಮಾಧಾನವಿದ್ದಿದ್ದರೆ, ಪಾಲಿಕೆ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಶಾಸಕರು, ಇತರೆ ನಾಯಕರಿಗೆ ಕರೆ ಮಾಡಿ, ಬ್ಯಾನರ್ ತೆಗೆಯಿರಿ ಎಂದಿದ್ದರೆ ಅವರು ತೆರವು ಮಾಡುತ್ತಿದ್ದರು. ಆದರೆ ಅವರು ಯಾರಿಗೂ ಸೂಚನೆ ನೀಡಿಲ್ಲ.

ಬದಲಿಗೆ ವಾಲ್ಮೀಕಿ ಅವರಿಗೆ ಅಪಮಾನವಾಗುವ ರೀತಿ ಬ್ಯಾನರ್ ತೆರವುಗೊಳಿಸಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತೆ ಬ್ಯಾನರ್ ಹಾಕಲು ಹೋಗಿದ್ದಾರೆ. ನಂತರದ ಘಟನೆಗಳನ್ನು ನಾನು ನೋಡಿದ್ದೇನೆ. ಅವರ ಮುಖಂಡತ್ವದಲ್ಲೇ ಬ್ಯಾನರ್ ಹರಿದುಹಾಕಿದ್ದಾರೆ. ಇದು ಸರಿಯೋ ತಪ್ಪೋ ಎಂದು ನಾನು ತೀರ್ಮಾನ ಮಾಡುವುದಿಲ್ಲ, ನೀವುಗಳೇ ತೀರ್ಮಾನ ಮಾಡಿ ಎಂದು ಅವರು ಹೇಳಿದರು. 

ನಾನು ಯಾರ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ನೀಡಲು ಇಲ್ಲಿಗೆ ಬಂದಿಲ್ಲ. ಕಾನೂನು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಬಹಳ ದಿಟ್ಟವಾಗಿ ಅಗತ್ಯ ತೀರ್ಮಾನ ತೆಗೆದುಕೊಂಡಿದ್ದಾರೆ. ಭದ್ರತಾ ಸಿಬ್ಬಂದಿ ನಡೆ ಸರಿ ಎಂದು ನಾನು ಹೇಳುವುದಿಲ್ಲ.

ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟವರನ್ನು ಬಂಧಿಸಿದ್ದಾರೆ, ಖಾಸಗಿ ಭದ್ರತಾ ಸಿಬ್ಬಂದಿ ಹೊಂದಿರುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ.

ಬಳ್ಳಾರಿ ಇತಿಹಾಸ ದೊಡ್ಡದಿದೆ. ದಯವಿಟ್ಟು ಇದರ ಗೌರವಕ್ಕೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬೇಡಿ. ನಾನು ನಮ್ಮವರಿಗೆ ಬುದ್ಧಿವಾದ ಹೇಳಿದ್ದು, ಮುಂದೆಯೂ ಹೇಳುತ್ತೇನೆ. ಬಿಜೆಪಿಯವರಿಗೆ ಅವರ ನಾಯಕರು ಬಹಳ ದೊಡ್ಡವರಿದ್ದಾರೆ, ಅವರಿಗೆ ಬಿಡುತ್ತೇನೆ. 

ಮೃತ ಕಾರ್ಯಕರ್ತನ ಕುಟುಂಬದ ಜೊತೆ ಪಕ್ಷವಿದೆ. ಕಾನೂನು ಚೌಕಟ್ಟಿನಲ್ಲಿ ಮೃತ ಕಾರ್ಯಕರ್ತನ ಕುಟುಂಬಕ್ಕೆ ಪಕ್ಷದಿಂದ ನೆರವು ಹಾಗೂ ಸರ್ಕಾರಿ ಕೆಲಸ ನೀಡುವ ಬಗ್ಗೆ ಆಲೋಚನೆ ಮಾಡಲಾಗುವುದು. ಈ ಹಿಂದೆ ಯಾವ ತೀರ್ಮಾನ ಆಗಿದೆ ಎಂದು ನೋಡಬೇಕಿದೆ ಎಂದು ವಿಜಯೇಂದ್ರ ತಾಕೀತು ಮಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ